Karnataka Rains: ಏಪ್ರಿಲ್‌ 2ರಿಂದ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆ ಸುರಿಯುತ್ತಿದೆ. ಹಾಗೆಯೇ ಏಪ್ರಿಲ್‌ 2ರಿಂದ ಹಲವು ಜಿಲ್ಲೆಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 30) ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ, ಬೆಂಗಳೂರು ಸೇರಿದಂತೆ ಹಲವು ಜಿಲ್ಲಗಳಲ್ಲೂ ಸಹ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Karnataka Rains Heavy Rainfall Forecast In Many Districts of State from April 2

ಏಪ್ರಿಲ್2ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್‌ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಾಖಲೆ ಮಟ್ಟದ ತಾಪಮಾನ: ಈಗಾಗಲೇ ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ವರದಿಯಾಗಿದೆ. ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ವರದಿಯಾಗಿದೆ.

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ನಗರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+