Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಭಾರೀ ಮಳೆಯಾಗುತ್ತಿದೆ. ಇನ್ನು ಇಂದು (ಮೇ 3) ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಹಾಗೆಯೇ ಶನಿವಾರ ಸಹ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅಲ್ಲದೆ, ಬೇರೆ ಜಿಲ್ಲೆಗಳಲ್ಲಿಯೂ ಕೂಡ ರಣ ಮಳೆ ಸುರಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Karnataka Rains Heavy rainfall forecast in many districts of state including Bengaluru today

ಪ್ರಸ್ತುತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆ ಮಳೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಸೇರಿದಂದರೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈಗಾಗಲೇ ಇಂದು ಬೆಳ್ಳಂಬೆಳಗ್ಗೆಯೇ ಹಲವು ಜಿಲ್ಲೆಗಳಲ್ಲಿ ರಣಮಳೆ ಸುರಿದಿದೆ. ಇನ್ನು ಶನಿವಾರ ಉತ್ತರ ಕರ್ನಾಟಕದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ತುಮಕೂರು ಜಿಲ್ಲೆಯ ಸಿರಾ, ಬರಗೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ಚಿಕ್ಕಮಗಳೂರು ಜಿಲ್ಲೆಯ ಯಗಟಿ, ಹಾಸನ ಜಿಲ್ಲೆಯ ಬೇಲೂರು, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಉಪ್ಪಿನಂಗಡಿ, ಬೆಳ್ತಂಗಡಿಯಲ್ಲಿ ಮಳೆಯಾಗಿದೆ ಎಂದು ವರದಿಯಾಗಿದೆ.

ಅಲ್ಲದ, ಕರಾವಳಿ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನವು 33-37 ಡಿಗ್ರಿ ಸೆಲ್ಸಿಯಸ್‌, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಯಲ್ಲಿ 36-39 ಡಿಗ್ರಿ ಸೆಲ್ಸಿಯಸ್‌, ಬೀದರ್‌, ವಿಜಯಪುರ, ರಾಯಚೂರಿನಲ್ಲಿ 40-41 ಡಿಗ್ರಿ ಸೆಲ್ಸಿಯಸ್‌, ಕಲಬುರಿಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾದ ಬಗ್ಗೆ ವರದಿಯಾಗಿದೆ.

ಚಿಕ್ಕಮಗಳೂರು, ಹಾಸನ, ಮಡಿಕೇರಿಯಲ್ಲಿ ತಾಪಮನವು 29-32 ಡಿಗ್ರಿ ಸೆಲ್ಸಿಯಸ್‌, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 29-32 ಡಿಗ್ರಿ ಸೆಲ್ಸಿಯಸ್‌, ಚಿಂತಾಮಣಿ, ದಾವಣಗೆಯಲ್ಲಿ 36 ಡಿಗ್ರಿ ಸೆಲ್ಸಿಯಸ್‌ ಸನಿಹದಲ್ಲಿತ್ತು ಎಂದು ತಿಳಿದುಬಂದಿದೆ.

ರಾಜ್ಯ ರಾಜಧಾನು ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಆಗಲಿದೆ. ಗಾಳಿಯ ವೇಗವೂ ಅಲ್ಲಲ್ಲಿ ಏರಿಕೆ ಅಗಿದೆ. ಬೆಂಗಳೂರಿನಲ್ಲಿ ಇಂದು ತಾಪಮಾನವು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಆದರೆ, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+