Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ನೈರುತ್ಯ ಮನ್ಸೂನ್‌ ಆರಂಭವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 18) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, 9 ಗಂಟೆಯಿಂದ ರಣಬಿಸಿಲು ಮುಂದುವರೆದಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ನಿನ್ನೆ ಇದೇ ರೀತಿ ಮಧ್ಯಾಹ್ನ ಕೆಲವು ಗಂಟೆ ಹಾಗೂ ರಾತ್ರಿ ಭಾರೀ ಮಳೆಯಾದ ಪರಿಣಾಮ ನಗರದ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ.

Karnataka Rains Heavy rainfall forecast in Many districts Till May 22

ಮತ್ತೊಂದೆಡೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಂದರೆ ಮೇ 22ರ ವರೆಗೂ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಸಹ ಘೋಷಣೆ ಮಾಡಲಾಗಿದೆ.

ಮೇ 22ರವರೆಗೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲವಯ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಮೇ 18 ಹಾಗೂ 19ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಈಗಾಗಲೇ ನಿನ್ನೆ ಅಂದರೆ ಶನಿವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ವಿಜಯಪುರ, ಶಿವಮೊಗ್ಗ, ಕೊಡಗು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿದು ಅವಾಂತರಗಳನ್ನೇ ಸೃಷ್ಟಿಸಿದೆ. ಹಾಗೆಯೇ ಇಂದು ಸಹ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ. ಜೊತೆಗೆ ಗಂಟೆಗೆ 30-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.

ಮತ್ತೊಂದೆಡೆ ರಾಯಚೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+