Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಎಷ್ಟು ದಿನ ಗೊತ್ತಾ?
Karnataka Rains: ಇದೀಗ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ವಾರಗಳ ಕಾಳ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 22) ಬೆಳಗ್ಗೆ ಮಂಜು ಮುಚ್ಚಿದ ವಾತಾವರಣ ಇದ್ದು, ಮಧ್ಯಾಹ್ನದಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ರಾತ್ರಿ ವೇಳೆಗೆ ಮತ್ತೆ ಮಂಜಿನ ಜೊತೆ ಚಳಿ ವಾತಾವರಣ ಇರಲಿದ ಎಂದು ತಿಳಿಸಿದೆ.

ಎಲ್ಲೆಲ್ಲಿ ಮಳೆ?: ನವೆಂಬರ್ 22ರಿಂದ 30ರ ವರೆಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಯಿರಿ.
ನವೆಂಬರ್ 30ರಿಂದ ಡಿಸೆಂಬರ್ 8ರ ವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಮಂಡ್ಯ, ಹಾಸನ, ಕೊಡಗು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧತೆಯಿದೆ. ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ ಎಂದು ಮುನ್ಸೂಚನೆ ನೀಡಿದೆ.
ಇನ್ನು ಇದೇ ವೇಳೆ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ತುಮಕೂರು, ಚಿತ್ರದುರ್ಗ, ವಿಜಯನಗರ, ಗದಗ, ದಾವಣಗೆರೆ, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ವಿಜಯಪುರ, ರಾಯಚೂರು ಜಿಲ್ಲೆಗಳ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಇನ್ನುಳಿದ ಜಿಲ್ಲೆಗಳ ವಾತಾವರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದೆ.
ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದು, ಇದರಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿದ್ದವು. ಮತ್ತೊಂದೆಡೆ ನೋಡುವುದಾದರೆ, 2023ರ ಬರದ ಬೇಗೆಯಿಂದ ಬೇಯುತ್ತಿದ್ದ ರೈತರ ಮುಖದಲ್ಲಿ ಮಂದಹಾಸದ ಕಳೆ ಮೂಡಿದಂತಾಗಿದೆ.
2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದವು. ಅಲ್ಲದೆ, ಜಲಮೂಲಗಳೆಲ್ಲ ಬತ್ತಿಹೋಗುವ ಹಂತವನ್ನು ತಲುಪಿ ಅಂತರ್ಜಲ ಮಟ್ಟ ಕುಸಿಯುತ್ತಲೇ ಇತ್ತು. ಇದರಿಂದ ಬೋರ್‌ವೆಲ್‌ಗಳಲ್ಲಿ ನೀರೇ ಇಲ್ಲದೆ ರೈತರು ಕಂಗಾಲಾಗಿದ್ದರು. ಆದರೆ, 2024ರ ಜೂನ್ ಆರಂಭ ಆಗುತ್ತಿದ್ದಂತೆ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸಿದ್ದು, ಪರಿಣಾಮ ಜಲಮೂಲಗಳೆಲ್ಲ ಭರ್ತಿಯಾದವು. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications