Cyclone Fengal: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆ ಮುನ್ಸೂಚನೆ
Cyclone Fengal: ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇದೀಗ ಚಳಿಯ ನಡುವೆಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಡಿಸೆಂಬರ್ 14ರ ವರೆಗೆ ಹಲವೆಡೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 28) ಬೆಳಗ್ಗೆ 10 ಗಂಟೆವರೆಗೂ ಮಂಜಿನ ಜೊತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವೆಂಬರ್ 28ರಿಂದ ಡಿಸೆಂಬರ್ 6ರ ವರೆಗೆ ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮಂಡ್ಯ, ಬಳ್ಳಾರಿ, ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಕೊಡಗು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದೇ ವೇಳೆ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇನ್ನುಳಿದ ಕೆಲವು ಜಿಲ್ಲೆಗಳಲ್ಲಿ ಮಳೆಯ ಯಾವುದೇ ಲಕ್ಷಣಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 6ರಿಂದ 16ರ ವರೆಗೆ ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಉಡುಪಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಬೆಂಗಳೂರು ನಗರ, ವಿಜಯನಗರ, ದಾವರವಾಡ ಜಿಲ್ಲಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಲಕ್ಷಗಣಗಳು ಇರುವುದಿಲ್ಲ ಎಂದು ತಿಳಿಸಿದೆ.
ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿನ್ನೆವರೆಗೂ ಚಳಿಯ ಜೊತೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವೆಡೆ ಜಿನುಗು ಮಳೆ ಕೂಡ ಆಗಿದೆ. ಇನ್ನು ಮುಂದಿನ ಎರಡು ವಾರಗಳಲ್ಲಿ ನಗರದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆಗಳು:
— Karnataka State Natural Disaster Monitoring Centre (@KarnatakaSNDMC) November 28, 2024
Cumulative Rainfall Forecast Maps for the next 2 weeks over the State #KSNDMC pic.twitter.com/cZ2i54IUBq
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳುನ ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯದ ರೈತರ ಬೆಳೆಗಳೆಲ್ಲ ಸೂರ್ಯ ಶಾಕಕ್ಕೆ ಸುಟ್ಟು ಹೋಗಿದ್ದವು. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸವೇ ಇಲ್ಲದಂತಾಗಿತ್ತು. ಆದರೆ ಈ ಬಾರಿ ಅಂದರೆ 2024ರ ಜೂನ್ ಆರಂಭವಾಗುತ್ತಿದ್ದಂತೆ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟು ರೈತರ ಹೊಟ್ಟೆಯನ್ನು ತಣ್ಣಗಾಗಿಸಿದೆ.












Click it and Unblock the Notifications