Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಮಳೆ ಮುನ್ಸೂಚನೆ
Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಇನ್ನು ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಒಂದು ವಾರಗಳ ಕಾಲ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 21) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದಿಂದ ಸಂಜೆ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆದಿತ್ತು. ಇನ್ನೂ ಕೆಲವೇ ಗಂಟೆಗಳಲ್ಲಿ ಮಳೆ ಸುರಿಯು ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲಿ ಸಹ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವೆಂಬರ್ 27ರ ವರೆಗೆ ಎಲ್ಲೆಲ್ಲಿ ಮಳೆ?: ನವೆಂಬರ್ 21ರಿಂದ 27ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬಳ್ಳಾರಿ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ವೇಳೆ ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ಗದಗ ಜಿಲ್ಲೆಗಳಲ್ಲಿ ಮೋಡ ಕವಿದಾ ವಾತವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ.
ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆಗಳು:
— Karnataka State Natural Disaster Monitoring Centre (@KarnatakaSNDMC) November 21, 2024
Cumulative Rainfall Forecast Maps for the next 2 weeks over the State #KSNDMC pic.twitter.com/rkI9IZGXuf
ಡಿಸೆಂಬರ್ 7ರ ವರೆಗೆ ಎಲ್ಲೆಲ್ಲಿ ಮಳೆ?: ನವೆಂಬರ್ 29ರಿಂದ ಡಿಸೆಂಬರ್ 7ರ ವರೆಗೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇದೇ ವೇಳೆ ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ ಎಂದು ತಿಳಿಸಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.
ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾದ ಪರಿಣಾಮ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಈ ಭಾರೀ ಮುಂಗಾರು ಮಳೆ ಆರ್ಭಟಿಸಿದ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕೆಆರ್‌ಎಸ್, ಕಬಿನಿ, ಹೇಮಾವತಿ, ಹಾರಂಗಿ, ತುಂಗಭದ್ರಾ, ಭದ್ರಾ, ಆಲಮಟ್ಟಿ, ಘಟಪ್ರಭಾ ಸೇರಿದಂತೆ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಈ ಬಾರಿ ಭರ್ತಿಯಾಗಿವೆ. ಇದೀಗ ಹಿರಿಯೂರು ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ.












Click it and Unblock the Notifications