Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 11ರ ವರೆಗೆ ಭಾರೀ ಮಳೆ ಸುರಿಯುವ ಮುನ್ಸೂಚನೆ

Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಡಿಸೆಂಬರ್ 11ರ ವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 25) ಬೆಳಗ್ಗೆ ಮಂಜಿನ ಜೊತೆ ಮೋಡ ಕವಿದ ವಾತಾವರಣ ಇತ್ತು. ಆದರೆ 10 ಗಂಟೆಯಿಂದ ಸಂಜೆ 4ರ ವರೆಗೂ ಬಿಸಿಲಿನ ವಾತಾವತರಣ ಇದ್ದು, ಬಳಿಕ ಮೋಡ ಮುಚ್ಚಿದ ವಾತಾವರಣದ ಕೊತೆಗೆ ಚಳಿ ವಾತಾವರಣ ಮುಂದುವರೆದಿದೆ. ಇನ್ನು ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Karnataka Rains Heavy Rainfall Forecast in These districs Till December 11

ನವೆಂಬರ್ 25ರಿಂದ ಡಿಸೆಂಬರ್ 3ರ ವರೆಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ ಎಂದಿ ತಿಳಿಸಿದೆ.

8 ದಿನ ಭಾರೀ ಮಳೆ ಮುನ್ಸೂಚನೆ: ಡಿಸೆಂಬರ್ 3ರಿಂದ 11ರ ವರೆಗೂ ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಶಿವಮೊಗ್ಗ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದೇ ವೇಳೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಧಾರವಾಡ, ವಿಜಯನಗರ, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಜಿಲ್ಲೆಗಳ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ತುಂತು ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೆ ಮಳೆಯ ಮುನ್ಸೂಚನೆ ಇರುವುದಿಲ್ಲ ಎದು ತಿಳಿಸಿದೆ.

ಈಗಾಗಲೇ, ಬೆಳಗಾವಿ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಕೊಡಗು, ಉಡುಪಿ, ಉತ್ತರ ಕನ್ನಡ, ರಾಮನಗರ, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಬೀದರ್, ಕೋಲಾರ, ಕೊಪ್ಪಳ, ಧಾರವಾಡ, ಹುಬ್ಬಳ್ಳಿ, ಹಾವೇರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿದೆ. ಪರಿಣಾಮ ಬಹುತೇ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳೆಲ್ಲವೂ ಸೂರ್ಯನ ಶಾಖಕ್ಕೆ ಸುಟ್ಟು ಹೋಗಿದ್ದವು. ಅಲ್ಲದೆ, ಜಲಮೂಲಗಳೆಲ್ಲ ಬತ್ತಿಹೋಗುವ ಹಂತವನ್ನು ತಲುಪಿ ಅಂತರ್ಜಲ ಮಟ್ಟ ಕುಸಿಯುತ್ತಲೇ ಇತ್ತು. ಇದರಿಂದ ಬೋರ್‌ವೆಲ್‌ಗಳಲ್ಲಿ ನೀರಿಲ್ಲದೆ, ರೈತರು ಆತಂಕಕ್ಕೆ ಒಳಗಾಗಿದ್ದರು. ಆದರೆ, 2024ರ ಜೂನ್‌ ಆರಂಭ ಆಗುತ್ತಿದ್ದಂತೆ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸಿದ್ದು, ಪರಿಣಾಮ ಜಲಮೂಲಗಳೆಲ್ಲ ಭರ್ತಿಯಾದವು. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಎರಡು ಪಟ್ಟು ಹೆಚ್ಚಾದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+