Karnataka Rains: ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ಬೆಸಿಗೆಗೂ ಮುನ್ನವೇ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಬಂಗಾಲಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ಮುಂದಿನ 4 ದಿನಗಳ ಕಾಲ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 1) ಬೆಳಗ್ಗೆ ತುಸು ಚಳಿ ಇದ್ದು, 10 ಗಂಟೆ ಮೇಲೆ ರಣಬಿಸಿಲು ಮುಂದುವರೆಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅಷ್ಟೇ ಅಲ್ಲದೆ, ಬಹುತೇಕ ಜಿಲ್ಲೆಗಳಲ್ಲಿ ಇದೇ ವಾತಾವರಣ ಇರಲಿದ್ದು, ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಹಲವೆಡೆ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದ್ದು, ಬಳಿಕ ಸಂಜೆವರೆಗೂ ರಣಬಿಸಿಲು ಮಂದುವರೆಯಲದದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ.
ಇದೀಗ ಬಹುತೇಕ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಪ್ರತಿ ವರ್ಷವೂ ಸಹ ಕಲಬುರಗಿ, ರಾಯಚೂರು, ಬಳ್ಳಾರಿ ಭಾಗಗಳಲ್ಲಿ ಅತೀ ಹೆಚ್ಚು ತಾಪಮಾನ ದಾಖಲಾಗುತ್ತಿತ್ತು. ಆದರೆ ಈ ಬಾರಿ ಉಲ್ಟಾ ಆಗಿಬಿಟ್ಟಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ ಎನ್ನುವ ವರದಿಯಾಗುತ್ತಲೇ ಇದೆ.
ಹಾಗೆಯೇ ಇಂದು (ಮಾರ್ಚ್ 1) ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ ಇರಲಿದೆ. ಉಳಿ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಣಬಿಸಿಲು ಮುಂದುವರೆಯುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ನಿನ್ನೆ ಅಂದರೆ ಫೆಬ್ರವರಿ 28ರಂದು ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತೀ ಹೆಚ್ಚು ಗರಿಷ್ಠ ಉಷ್ಣಾಂಶ, ಚಾಮರಾಜನಗರಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕಾರವಾರದ ಹಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕರಾವಳಿ ಕರ್ನಾಟಕದ ಮಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಹಾಗಾದ್ರೆ ಇನ್ನು ಎಲ್ಲೆಲ್ಲಿ ತಾಪಮಾನ ಪ್ರಮಾನ ಎಷ್ಟಿದೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕರಾವಳಿಯಲ್ಲಿ ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಹಾವೇರಿಯಲ್ಲಿ 32-34 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆ, ಕಲಬುರಗಿಯಲ್ಲಿ 35-37 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ನಷ್ಟಿದೆ ಎಂದು ತಿಳಿದುಬಂದಿದೆ.
ಕಳೆದ 24 ಗಂಟೆಗಳಲ್ಲಿ ಮಡಿಕೇರಿಯಲ್ಲಿ -2.8 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ತಾಪಮಾನದಲ್ಲಿ ಕುಸಿತವಾಗಿದೆ. ಕರಾಳಿಯಲ್ಲಿ ಕನಿಷ್ಠ ತಾಪಮಾನ 22-23 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. ಇನ್ನೂ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ ಧಾರವಾಡದಲ್ಲಿ 19-22 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದಲ್ಲಿ ಗರಿಷ್ಠ ಉಷ್ಣಾಂಶ 31.9 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 18.5 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 31.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಲಿದ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ತರವಾನಿಸಿದೆ. ಅದರಲ್ಲೂ ಕರವಾಳಿ ಭಾಗದ ಜನರು ಮಧ್ಯಾಹ್ನ 3 ಗಂಟೆ ವೇಳೆಗೆ ಬಿಸಿಲಿಗೆ ಬರಬಾರದು ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.












Click it and Unblock the Notifications