Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ಇದೀಗ ಚಳಿಗಾಲ ಮುಗಿಯುತ್ತಾ ಬಂದಿದ್ದು, ಬೇಸಿಗೆಗೂ ಮುನ್ನವೇ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದೆ. ಇದರ ನಡುವೆಯೂ ಹಲವೆಡೆ ಜಿನುಗು ಮಳೆಯಾಗುತ್ತಿದೆ. ಹಾಗೆಯೇ ಇಂದು (ಫೆಬ್ರವರಿ 23) ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದೀಗ ಇಂದು ಸಹ ಏರಿಕೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಇದರ ನಡುವೆಯೂ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಚಲನೆ ಹಿನ್ನೆಲೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಮತ್ತು ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾಣ ಇಲಾಖೆ ತಿಳಿಸಿದೆ.
ಈಗಾಗಲೇ ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ 33-35 °C ತಲುಪಿದೆ. ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ, ರಾಯಚೂರು ಮತ್ತು ಹಾವೇರಿಯಲ್ಲಿ 34-35 °C ಹಾಗೂ ಬೆಳಗಾವಿ ವಿಮಾನ ನಿಲ್ದಾಣ, ಕಲಬುರಗಿ, ಬಾಗಲಕೋಟೆ, ಗದಗದಲ್ಲಿ 36-38°C, ಚಿಕ್ಕಮಣಿ ಬೆಂಗಳೂರು, ಚಿಕ್ಕಮಣಿ, 31-33 °C, ಚಾಮರಾಜನಗರ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ ಮತ್ತು ಶಿವಮೊಗ್ಗದಲ್ಲಿ 34-36° ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಹಲವು ದಿನಗಳ ಕಾಲ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಆಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3°C, ದಕ್ಷಿಣ ಒಳನಾಡಿನಲ್ಲಿ 1-2°C ಮತ್ತು ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಬೆಳಗಿನ ವೇಳೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದ, 8 ಗಂಟೆ ಆಗುತ್ತಿದ್ದಂತೆ ತಪಾಮಾನ ಮೆಲ್ಲಗೆ ಏರಿಕೆಯಾಗುತ್ತಲೇ ಇದೆ. ಮುಂದಿನ ಹಲವು ದಿನಗಳ ಕಾಲ ನಗರದ ಹಲವೆಡೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 18°C ದಾಖಲಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಮತ್ತೊಂದೆಡೆ ಈ ಬಾರಿ ರಾಜ್ಯಕ್ಕೆ ಏಪ್ರಿಲ್-ಮೇ ತಿಂಗಳಿನಲ್ಲೇ ಮುಂಗಾರು ಎಂಟ್ರಿ ಕೊಡಲಿದೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆ ಬೇಸಿಗೆಗೂ ಮುನ್ನವೇ ಅಂದರೆ ಈಗಿನಿಂದಲೇ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನುವ ಮಾಹಿತಿ ಇದೆ. ಕಳೆದ ಬಾರಿ ಅಂದರೆ 2024ರ ಜೂನ್ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟ ಪರಿಣಾಮ ಪ್ರಮುಖ ಜಲಾಶಯಗಳು, ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿದ್ದು, ಉತ್ತಮ ಬೆಳೆಗಳು ಆಗಿದ್ದವು. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಚಿಗುರೊಡೆದಿತ್ತು.












Click it and Unblock the Notifications