Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಫೆಬ್ರವರಿ 24 ಮತ್ತು 25ರಂದು ಭಾರೀ ಮಳೆ ಮುನ್ಸೂಚನೆ
Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಫೆಬ್ರವರಿ 24 ಮತ್ತು 25ರಂದು ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಫೆಬ್ರವರಿ 24) ಬೆಳಗ್ಗೆ ತುಸು ಮಂಜು ಮುಸುಕಿದ ವಾತಾವರಣ ಇದೆ. ಮಧ್ಯಾಹ್ನದ ವೇಳೆಗೆ ಅದೇ ಆಡಿದ್ದೇ ಆಟ ಎನ್ನುವಂತೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನವೇ ತಾಪಮಾನದಲ್ಲಿ ದಿನದಿದಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆಯೂ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.

ಕರಾವಳಿ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ಹಾಗೂ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗುವ ಸಾಧ್ಯತೆಯಿದೆ. ಹೀಗೆ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಕೆಲವೆಡೆ ತಾಪಮಾನದಲ್ಲಿ 4-5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಪರಿಚಲನೆ ಹಿನ್ನೆಲೆ ರಾಜ್ಯದ ಕರಾವಳಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಹಾಗೂ ಉಡುಪಿಯ ಕೆಲವೆಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಫೆಬ್ರವರಿ 24 ಮತ್ತು 25ರಂದು ಮಳೆ ಸುರಿಯುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ತಾಪಮಾನದಲ್ಲಿ ಏರಿಕೆಯಾಗಲಿದೆ ಎಂದು ತಿಳಿಸಿದೆ.
ಈಗಾಗಲೇ ರಾಜ್ಯದ ಹಲವೆಡೆ ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಿದೆ. ಇನ್ನು ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಮುಂದಿನ 5 ದಿನಗಳಲ್ಲಿ ಕನಿಷ್ಠ ತಾಪಮಾನ 3-5 ಡಿಗ್ರಿ ಸೆಲ್ಸಿಯಸ್‌ನ್ಟು ಹೆಚ್ಚಾಗಲಿದೆ. ಇದೇ ರೀತಿ ಗರಿಷ್ಠ ತಾಪಮಾನ 1-3 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು (ಫೆಬ್ರವರಿ 24) ಬೆಂಗಳೂರು ನಗರದಲ್ಲಿ ತಾಪಮಾನ 21.4 ಡಿಗ್ರಿ ಸೆಲ್ಸಿಯಸ್, ಮಂಗಳೂರು 24 ಡಿಗ್ರಿ ಸೆಲ್ಲಿಯಸ್, ಚಿತ್ರದುರ್ಗ 23 ಡಿಗ್ರಿ ಸೆಲ್ಸಿಯಸ್, ಗದಗ 23 ಡಿಗ್ರಿ ಸೆಲ್ಸಿಯಸ್, ಹೊನ್ನಾವರ 26.8 ಡಿಗ್ರಿ ಸೆಲ್ಸಿಯಸ್, ಕಲಬುರಗಿ 24.4 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 25 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮನ್ಸೂಚನೆ ನೀಡಿದೆ.
ಈಗಾಗಲೇ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುತ್ತಿದೆ. ಇಂದು (ಫೆಬ್ರವರಿ 24) ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನದ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications