Karnataka Rains: ರಣಭೀಕರ ಬಿಸಿಲಿನ ನಡುವೆಯೂ ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಬಿರು ಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಬಾಂಗಳಾಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ಈ ಭಾಗಗಳಲ್ಲಿ ಇಂದು (ಫೆಬ್ರವರಿ 27) ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ ಚಳಿಯ ಪ್ರಮಾಣ ಇದ್ದು, 9 ಗಂಟೆ ಮೇಲೆ ಬಿರು ಬಿಸಿಲಿನ ವಾತಾವರಣ ನಿರ್ಮಾಣ ಆಗಲಿದೆ. ಇದು ಸಂಜೆವರೆಗೂ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಇಂದು ಕೂಡ ಗರಿಷ್ಠ ತಾಪಮಾನ ಹೆಚ್ಚಳವಾಗಲಿದೆ. ಆದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣದ ಅಲೆಗಳು ಇರಲಿವೆ. ಈ ನಡುವೆಯೇ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವೆಡೆ, ಚಿಕ್ಕಮಗಳೂರು, ಹಾಸನ ಕೊಡಗು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣಹವೆ ಇರಲಿದ್ದು, ಒಂದೆರಡು ಕಡೆಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ. ಕರಾವಳಿ ಕರ್ನಾಟಕದಲ್ಲಿ ಉಷ್ಣದ ಅಲೆ ಇರುವ ಮುನ್ಸೂಚನೆ ಇದ್ದು, ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಮುಂದಿನ 2 ದಿನಗಳವರೆಗೆ ಕರಾವಳಿಯಲ್ಲಿ ತಾಪಾಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ನಂತರ 3 ದಿನಗಳವರೆಗೆ ಈ ಭಾಗದಲ್ಲಿ ತಾಪಮಾನ ಪ್ರಮಾನ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಅದರಲ್ಲೂ ಶೇಷವಾಗಿ ಮಧ್ಯಾಹ್ನ 12ರಿಂದ 3 ಗಂಡೆಯವರೆಗೆ ತಪಾಮಾನ ಹೆಚ್ಚಿತಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಗರಿಷ್ಠ ತಾಪಮಾನ ಹೆಚ್ಚಳ ಆಗಲಿದೆ. 33 ಡಿಗ್ರಿ ಸೆಲ್ಸಿಯಸ್‌ವರೆಗೂ ದಾಖಲಾಗುವ ಸಾಧ್ಯತೆಯಿದೆ. ಇಂದು (ಫೆಬ್ರವರಿ 27) ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಗಲೇ ನಿನ್ನೆ ಅಂದರೆ ಫೆಬ್ರವರಿ 26ರಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 31.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 32.1 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ತಾಪಮಾನ 17.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು ಎಂದು ತಿಳಿದುಬಂದಿದೆ.












Click it and Unblock the Notifications