Karnataka Rains: ಕೆಲವೇ ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ಜೂನ್ ಆರಂಭದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದಿತ್ತು. ಆದರೆ, ದಿನಕಳೆದಂತೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವುದರ ಜೊತೆಗೆ ಮಳೆಯೂ ಕೂಡ ಮುಂದುವರೆದಿದೆ. ಹಾಗೆಯೇ ಇಂದು (ಜೂನ್ 17) ಇನ್ನೂ ಕೆಲವೇ ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದ ವೇಳೆಗೆ ಬಿಸಿಲು ಮುಂದುವರೆದಿದ್ದು, ಸಂಜೆ ವೇಳೆಗೆ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ರಾತ್ರಿ ವೇಳೆಗೆ ಮಳೆರಾಯನ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಮೈಸುರು, ದಕ್ಷಿಣ ಕನ್ನಡ, ದಾವಣಗೆರೆ, ಉಡುಪಿ ಸೇರಿದಂತೆ ಹಲವೆಡೆ ಮಳೆರಾಯ ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ.
ಇನ್ನೂ ಕೆಲವೇ ಗಂಟೆಗಳಲ್ಲಿ ಬೆಂಗಳೂರು, ಚಿಕ್ಕಮಗಳೂರು, ದಾವಣಗೆರೆ, ಬೀದರ್, ಧಾರವಾಡ, ಗದಗ, ಕೊಡಗು, ಮೈಸೂರು, ಮಂಗಳೂರು, ಬಾಗಲಕೋಟೆ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮತ್ತೊಂದೆಡೆ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಅದರಲ್ಲೂ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹಾವಮಾನ ಇಲಾಖೆ ಮುನ್ಸೂಚನೆ ನೀಡಿದೆ.
Light to Moderate rainfall in Some taluks of Chikkamagaluru this afternoon
— Namma Karnataka Weather (@namma_vjy) June 17, 2024
Mudigere and Narasimhapura recording widespread light to moderate showers this afternoon
GP: Taluk: Rainfall
Bankal: Mudigere: 58mm
Magundi:Narasimhapura: 44mm
Bettagere:Mudigere: 24mm
Bannur:… pic.twitter.com/yIrMuPjNAk
ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಇಂದು (ಜೂನ್ 17) ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ಮತ್ತು ನರಸಿಂಹಪುರದಲ್ಲಿ ಇಂದು ಮಧ್ಯಾಹ್ನ ಸಾಧಾರಣ ತುಂತುರು ಮಳೆಯಾಗಿದೆ.
ಬಂಕಲ್ 58 ಮಿ.ಮೀ, ಮಾಗುಂಡಿ ನರಸಿಂಹಪುರ 44 ಮಿ.ಮೀ, ಬೆಟ್ಟಗೆರೆ 24ಮಿ.ಮೀ, ಬನ್ನೂರು 24 ಮಿ.ಮೀ, ಬಾಳೂರು 17 ಮಿ.ಮೀ, ತೊದದೂರಿನಲ್ಲಿ 17 ಮಿ.ಮೀಟರ್ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದೇಶದ ಎಲ್ಲೆಲ್ಲಿ ಮಳೆ?: ಭಾರತದ ವಾಯುವ್ಯ ರಾಜ್ಯಗಳಲ್ಲಿ ಜೂನ್ 27-30ರೊಳಗೆ ಮುಂಗಾರು ಎಂಟ್ರಿ ಕೊಡುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿ ಸೋಮವಾರ ಹೇಳಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ, ಹರಿಯಾಣ, ಪಂಜಾಬ್, ದೆಹಲಿ ಚಂಡೀಗಢ, ರಾಜಸ್ಥಾನ, ಮಧ್ಯಪ್ರದೇಶ, ಮತ್ತು ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮುಂಗಾರು ಆರ್ಭಟಿಸುವ ಸಾಧ್ಯತೆಯಿದೆ. ಇನ್ನು ಜೂನ್ 18 ಅಥವಾ 19 ರಿಂದ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನೈಋತ್ಯ ಮಾರುತ ಜೂನ್ 18 ಅಥವಾ 19ರಿಂದ ಪಂಜಾಬ್ ಮತ್ತು ಹರಿಯಾಣದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಇನ್ನು ಈಶಾನ್ಯ ಭಾರತದಲ್ಲಿ ಮುಖ್ಯವಾಗಿ ಮೇಘಾಲಯ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಮುಂದಿನ 3-5 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ಜೂನ್ 19ರವರೆಗೆ ಅಸ್ಸಾಂ ಮತ್ತು ಮೇಘಾಲಯ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಇದೇ ವೇಳೆ ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜೂನ್ 20-21ರಂದು ಒಡಿಶಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್, ಕೊಂಕಣ, ಗೋವಾ, ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಮುಂದಿನ 5 ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರೆಡ್ ಅಲರ್ಟ್ ಘೋಷಣೆ: ಮತ್ತೊಂದೆಡೆ ಉತ್ತರ ಭಾರತದಲ್ಲಿ ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ನದೆಹಲಿಯಲ್ಲಿ ತಾಪಾಮನಾ ಪ್ರಮಾಣದಲ್ಲಿ ಹೆಚ್ಚಾಗುವ ಮುನ್ಸೂಚನೆ ಹಿನ್ನೆಲೆ, ಈ ಭಾಗಗಳಿಗೆ ರೆಡ್ ಅಲರ್ಟ್ ಘೋಚಣೆ ಮಾಡಲಾಗಿದೆ.
ಜೂನ್ 18ರಂದು ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗ, ನವದೆಹಲಿ, ಹಿಮಾಚಲ ಪ್ರದೇಶ ಮತ್ತು ಬಿಹಾರದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿಯ ವಾತಾವರಣ ಇರಲಿದೆ. ಜಮ್ಮು-ಕಾಶ್ಮೀರ, ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ಜೂನ್ 19ರವರೆಗೆ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications