Karnataka Rains: ರಾಜ್ಯದ ಈ ಭಾಗಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಮಳೆರಾಯ ಮತ್ತೆ ಆರ್ಭಟ ಶುರು ಮಾಡಿದ್ದಾನೆ. ಈಗಾಗಲೇ ಸುರಿದ ಭಾರೀ ಮಳೆಯಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಪ್ರಮಾಣದಲ್ಲಿ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇಂದು (ಅಕ್ಟೋಬರ್ 25) ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್‌ 25) ಸೂರ್ಯ ಕಾಣಿಸಿಕೊಂಡಿದ್ದಾನೆ. ಮಧ್ಯಾಹದ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ನಗರದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಗರದಲ್ಲಿ ಮಳೆರಾಯನ ಅಬ್ಬರಿಸುತ್ತಲೇ ಇದ್ದಾನೆ.

Karnataka Rains Heavy Rainfall Forecast in These Districts at Next Three Hours on october 25

ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಗಳಲ್ಲಿ ಮಳೆ ಆಗುತ್ತಿದೆ. ಹಾಗೆಯೇ ಇಂದು ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಇನ್ನೂ ಕೆಲವೇ ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಈ ಬಾರಿ ಅಂದರೆ 2024ರ ಜೂನ್‌ ಆರಂಭ ಆಗುತ್ತಿದ್ದಂತೆ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಇದರಿಂದ ಬಹುತೇಕ ಜಿಲ್ಲೆಗಳಲ್ಲಿನ ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ತುಂಬು ಹರಿದಿದ್ದು, ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿಸಿತ್ತು. 2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಸುಟ್ಟುಹೋಗಿ, ಅನ್ನದಾತರು ಕಂಗಾಲಾಗಿದ್ದರು.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬೀದರ್‌, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಬಳ್ಳಾರಿ, ರಾಯಚೂರು, ಬೀಜಾಪುರ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಈ ಬಾರಿ ಉತ್ತಮ ಮಳೆಯಾಗಿದೆ. ಇದರಿಂದ ಅನ್ನದಾತರ ಹೊಟ್ಟೆ ತಣ್ಣಗಾದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+