Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 30ರ ವರೆಗೂ ರಣಭೀಕರ ಮಳೆ ಮುನ್ಸೂಚನೆ

Karnataka Rains: ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಹಲವೆಡೆ ಗುಡುಗು, ಮಿಂಚು ಸಹಿತ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 30) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಒಂದು ವಾರದಿಂದ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಕೆಲವೆಡೆ ಜಿನುಗು ಹನಿ ಬೀಳುತ್ತಿದೆ. ಹಾಗೆಯೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy Rainfall Forecast in These Districts for Next 2 days from may 30

ರಾಜ್ಯದಲ್ಲಿ ಜೂನ್ 2ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ಕೊಡಗು, ಕಾರವಾರ, ಶಿವಮೊಗ್ಗ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಲವೆಡೆ ರಸ್ತೆಗಳು ಕಿತ್ತುಬಂದಿದ್ದು, ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಅಲ್ಲದೆ, ಯಾದಗಿರಿ, ವಿಜಯಪುರ, ರಾಯಚೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗಿದೆ.

ತಾಪಮಾನದ ವಿಚಾರಕ್ಕೆ ಬಂದ್ರೆ, ಬೆಂಗಳೂರಿನ ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ವರದಿಯಾಗಿದೆ.

ಈಗಾಗಲೇ ಮೇ 29ರಂದು ನೈಋತ್ಯ ಮಾನ್ಸೂನ್ ಛತ್ತೀಸ್‌ಗಢ ಮತ್ತು ಒಡಿಶಾದ ಕೆಲವು ಭಾಗಗಳು, ಉತ್ತರ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ರಾಜ್ಯಗಳ ಉಳಿದ ಭಾಗಗಳು ಮತ್ತು ಪಶ್ಚಿಮ ಬಂಗಾಳದ ಕೆಲವೆಡೆ ಪ್ರವೇಶ ಮಾಡಿದೆ.

ಕೇರಳ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಭಾರೀ ಮಳೆ ಮುಂದುವರೆದಿದೆ. ಇನ್ನು ಬಿಹಾರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಿಗೆ ಮುಂಗಾರು ಶೀಘ್ರದಲ್ಲೇ ಎಂಟ್ರಿ ಕೊಡುವ ಸಾಧ್ಯತೆಯಿದೆ. ಹವಾಮಾನ ವೈಪರಿತ್ಯದಿಂದ ಕಳೆದ ಹಲವು ದಿನಗಳಿಂದ ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ನವದೆಹಲಿ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ರಣಮಳೆ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+