Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ; ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆ
Karnataka Rains: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಮುಂದಿನ ಮೂರು ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜುಲೈ 19) ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆಯಾಗವ ಸಾಧ್ಯತೆಯಿದೆ. ಅಲ್ಲದೆ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಬೆಂಗಳೂರು, ಮಂಡ್ಯ, ರಾಮನಗರ ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ
ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ತಾಪಮಾನದ ವಿವರ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೂರು ದಿನ ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಕೋಲಾರ, ಬೀದರ್, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ
ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಒಂದೆರಡು ಕಡೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದ್ದು ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮತ್ತೊಂದೆಡೆ ಭಾರೀ ಮಳೆ ಮುಂದುವರೆದರೆ, ಅಂತಹ ಜಿಲ್ಲೆಗಳಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಒಂದು ವೇಳೆ ರಜೆ ಘೋಷಣೆ ಮಾಡಿದ್ರೆ, ಆ ರಜೆಗಳನ್ನು ಸರಿದೂಗಿಸುವ ಕ್ರಮಕ್ಕೂ ಮುಂದಾಗಲಾಗುತ್ತದೆ. ಯಾಕಂದ್ರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದುಳಿಯಬಾರದು ಎನ್ನುವ ಕಾರಣದಿಂದ. ಈಗಾಗಲೇ ಭಾರೀ ಮಳೆಯಾಮದಂತಹ ಸಂದರ್ಭಗಳಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಅವುಗಳನ್ನು ಸರಿದೂಗಿಸುವ ಕೆಲಸಗಳು ಕೂಡ ಆಗಿವೆ.












Click it and Unblock the Notifications