Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಜೂನ್ 15ರ ವರೆಗೂ ರಣಭೀಕರ ಮಳೆ ಮುನ್ಸೂಚನೆ
Karnataka Rains: ರಾಜ್ಯಕ್ಕೆ ಅವಧಿಗೆ ಮುನ್ನ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಆರ್ಭಟ ಕೆಲ ದಿನಗಳಿಂದ ತಗ್ಗಿತ್ತು. ಆದರೆ ಇದೀಗ ಮತ್ತೆ ಬಹುತೇಕ ಜಿಲ್ಲೆಗಳಲ್ಲಿ ವರುಣ ಆರ್ಭಟವನ್ನು ಮುಂದುವರೆಸಿದ್ದಾನೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜೂನ್ 13) ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ಹಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ಮಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಕಳೆದ ಎರಡ್ಮೂರು ದಿನಗಳಿಂದ ಮುಂಗಾರು ಚುರುಕು ಪಡೆದಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದೆ. ಹಾಗೆಯೇ ಇದಿನಿಂದ ಮುಂದಿನ ಮೂರು ದಿನಕಾಲ ಕಾಲ ರಣಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಜೂನ್ 13ರಂದು ಎಲ್ಲೆಲ್ಲಿ ಮಳೆ?: ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿರುವ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಹಾಸನ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 14ರಂದು ಎಲ್ಲೆಲ್ಲಿ ಮಳೆ?: ಶನಿವಾರ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಜೂನ್ 15ರಂದು ಎಲ್ಲೆಲ್ಲಿ ಮಳೆ?: ಭಾನುವಾರ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಯಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌ಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಮುಂದಿನ ವಾರವೂ ಸಹ ಮಳೆ ಮುಂದುವರೆಯಯವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಇಂದು ಜೂನ್ 13ರಂದು ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications