ರಾಜ್ಯದ ಈ ಜಿಲ್ಲೆಗಳಲ್ಲಿ ಜೂನ್‌ 3ರ ವರೆಗೂ ರಣಭೀಕರ ಮಳೆ ಮುನ್ಸೂಚನೆ: ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌

Karnataka Rains: ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಣಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 31) ಬೆಳಗ್ಗೆ ಬಿಸಿಲಿನ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಮಳೆ ತಗ್ಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಆರ್ಭಟಿಸುವ ಮುನ್ಸೂಚನೆ ಇದೆ.

Karnataka Rains Heavy Rainfall Forecast in These Districts for Next 3 days from may 31

ಮುಂದಿನ 3 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದ್ದು, ಈ ಹಿನ್ನೆಲೆ ಮುಂಜಾಂಗ್ರತಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ನೀಡಿದೆ. ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್ ಹಾಗೂ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್​ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಣಮಳೆ ಮುಂದುವರೆದ ಪರಿಣಾ ಇಲ್ಲಿನ ಜನಜೀವನ ಅಸ್ತವ್ಯಸ್ತ ಆಗಿದೆ. ಈಗಾಗಲೇ ಭಾರಿ ಮಳೆಯಿಮದ ಜಿಲ್ಲೆಯ ಉಲ್ಲಾಳ ಬಳಿ ಭೂಕುಸಿತ ಉಂಟಾಗಿ ಒಂದೇ ದಿನ ನಾಲ್ವರು ಬಲಿಯಾಗಿದ್ದರು. ಇನ್ನೂ ಇದೀಗ ಮಳೆ ಮುಂದುವರೆದ ಪರಿಣಾಮ ಮತ್ತೆ ಗುಡ್ಡ ಕುಸಿತವಾಗುವ ಆತಂಕ ಎದುರಾಗಿದೆ. ಆದ್ದರಿಂದ ಈ ಭಾಗದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಭಾರೀ ಮಳೆ ಮುಂದುವರೆಯುವ ಹಿನ್ನೆಲೆ ಹವಾಮಾನ ಇಲಾಖೆಯುವ ಜಿಲ್ಲೆಗೆ ಶನಿವಾರ ಸಹ ರೆಡ್ ಅಲರ್ಟ್ ಘೋಷಣೆ ಮಾಡಿದೆ. 115-204 ಮಿಲಿ ಮೀಟರ್‌ವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಕೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿತೆಗೆ ತಗ್ಗು ಪ್ರದೇಶಗಳಲ್ಲಿ ವಾಸ ಮಾಡುವವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಈಗಾಗಲೇ ಭಾರೀ ಮಳೆಯಿಂದ ಬರೀ ದಕ್ಷಿಣ ಕನ್ನಡ ಜಿಲ್ಲೆ ಅಷ್ಟೇ ಅಲ್ಲದೆ, ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಕೆಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದರೆ, ಇನ್ನೂ ಕಲವೆಡೆ ಮರಗಳು ಧರೆಗುರುಳಿ ರಸ್ತೆಗಳು ಸಂಪೂರ್ಣ ಬಂದ್‌ ಆದ ಘಟನೆಗಳು ನಡೆದಿವೆ. ಇನ್ನೂ ಮುಂದಿನ ಹಲವು ದಿನಗಳ ಕಾಲ ಮಳೆ ಹೀಗೆ ಮುಂದುವರೆದರೆ, ಇನ್ನೇನು ಅನಾಹುತಗಳು ಸಂಭವಿಲಿವೆಯೋ ಎಂದು ಊಹಿಸಿಕೊಳ್ಳಲು ಸಾಧ್ಯ ಇಲ್ಲದಂತಾಗಿದೆ.

ಕಳೆದ ಬಾರಿ ಅಂದರೆ 2024ರಲ್ಲಿ ಜೂನ್ ಆರಂಭದಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿತ್ತು. ಆದರೆ, ಈ ಬಾರಿ 2025ರಲ್ಲಿ ಅವಧಿಗೂ ಮುನ್ನ ಮುಂಗಾರು ಪ್ರವೇಶ ಮಾಡಿ ಅವಾಂತರಗಳನ್ನೇ ಸೃಷ್ಟಿದೆ. ಇನ್ನೂ ಮುಂದಿನ ದಿನಗಳಲ್ಲಿ ಯಾವ ಪ್ರಮಾಣದಲ್ಲಿ ಮಳೆಯಾಗಲಿದೆಯೋ ಎಂಬ ಆತಂಕದಲ್ಲಿ ಜನರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+