Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಅವಾಂತರಗಳನ್ನೇ ಸೃಷ್ಟಿಸಿದೆ. ಇನ್ನು ಇದೀಗ ಚಳಿಯ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 08) ಬೆಳಗ್ಗೆ 9 ಗಂಟೆವರೆಗೂ ಮಂಜಿನ ವಾತಾವರಣ ಇದ್ದು, ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಂಗಳೂರು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy Rainfall Forecast in These districts for Next 5 days From December 8

ರಾಜ್ಯದ್ಯಂತ ಅಲ್ಲಲ್ಲಿ ಚದುರಿದಂತೆ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂವಚನೆ ನೀಡಿದೆ.

ಉತ್ತರ ಒಳನಾಡಿದ ಬೀದರ್‌, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆಗೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಪ್ರತ್ಯೇಕವಾಗಿ ಅಲ್ಲಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ಬಹುತೇಕ ಜಲಮೂಲ ಬತ್ತಿ ಹೋಗುವ ಹಂತವನ್ನು ತಲುಪಿದ್ದವು. ಮತ್ತೊಂದೆಡೆ ಇದರಿಂದ ಕೃಷಿ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಬತ್ತಿ ಹೋಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸವೇ ಕಮರಿ ಹೋಗಿತ್ತು. ಇನ್ನು 2024ರ ಜೂನ್‌ ಆರಂಭ ಆಗುತ್ತಿದ್ದಂತೆ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಟ್ಟ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆ ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು ಬಳಿಕವೇ ಕರ್ನಾಟಕದಲ್ಲಿ ಅಬ್ಬರಿಸಿತು. ಇದಾದ ನಂತರ ದೇಶದ ಬಹುತೇಕ ಭಾಗಗಳಿಗೆ ಆವರಿಸಿಬಿಟ್ಟಿತು. ಅದರಲ್ಲೂ ಈ ಬಾರಿ ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ, ಬಾಗಲಕೋಟೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+