Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ರಣಮಳೆ ಸುರಿಯುವ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮುಂಗಾರು ಇದೀಗ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ರಣಮಳೆ ಸುರಿಯಲಿದ್ದು, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜೂನ್‌ 28) ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಒಂದು ವಾರದ ಹಿಂದೆ ನಗರದ ಹಲವೆಡೆ ರಣಮಳೆ ಸುರಿದು ಅವಾಂತರಗಳೇ ಸೃಷ್ಟಿಯಾಗಿದ್ದವು. ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಕೆಲವೆಡೆ ಎರಡು ದಿನಗಳಿಂದ ಸಾಧಾರಣ ಮಳೆಯಾಗಿದೆ. ಇನ್ನೂ ಮುಂದಿನ ದಿನಗಳಲ್ಲಿ ವರುಣ ಆರ್ಭಟಿಸಲಿದ್ದಾನೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy Rainfall Forecast in These Districts of Karnataka state for Next 5 days from June 28 2025 IMD Alert

ಇಂದು (ಜೂನ್‌ 28) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಉಳಿದ ಜಿಲ್ಲೆಗಳಲ್ಲೂ ವ್ಯಾಪಕ ಮಳೆ ಸುರಿಯುವ ಸಾಧ್ಯತೆಯಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ದಾಖಲಾಗಬಹುದು ಎಂದು ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬಿಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಜೂನ್‌ 29ರ ಭಾಬುವಾರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ಬೀದರ್, ಹಾವೇರಿ, ಗದಗ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮೈಸೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಜೂನ್‌ 30 ಹಾಗೂ ಜುಲೈ 1ರಂದು ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ಬೀದರ್, ಹಾವೇರಿ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ವಿಜಯನಗರ, ಹಾಸನ, ಕೋಲಾರ, ಕೊಡಗು, ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಮುನ್ಸೂಚನೆ ನೀಡಿದೆ.

ಜುಲೈ 2 ಮತ್ತು 3ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದ‌ರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮತ್ತು ಕೊಡಗು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಳ್ಳ-ಕೊಳ್ಳಗಳು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಜನರು ಜೀವವನ್ನು ಕೈಹಿಡಿದು ಓಡಾಡುವಂತಹ ಪರಿಸ್ಥಿತಿ ಹಲವು ಜಿಲ್ಲೆಗಳಲ್ಲಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಳೆರಾಯನ ಆರ್ಭಟ ಹೀಗೆ ಮುಂದುವರೆದರೆ ಇನ್ನೂ ಏನೆಲ್ಲಾ ಅನಾಹುತಗಳು ಆಗಲಿವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+