Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿರುಗಾಳಿ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಕಳೆದ ಒಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಹಾಗೆಯೇ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಅಕ್ಟೋಬರ್ 16 ಮತ್ತು 17ರಂದು ದಕ್ಷಿಣ ಒಳನಾಡಿದ 9 ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

Karnataka Rains Heavy Rainfall Forecast in These Districts for next five days from actober 14

ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಈ ಭಾಗಗಳಿಗೆ ಅಕ್ಟೋಬರ್‌ 17ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಅಕ್ಟೋಬರ್ 14 ರಿಂದ 18 ರವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ದಿನಕಳೆದಂತೆ ಮತ್ತೆ ಮಳೆ ಪ್ರಮಾಣ ತಗ್ಗಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 12ರಂದು ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗಿದೆ ಎಂದು ಐಎಂಡಿ ವಿಜ್ಞಾನಿ ಸಿ.ಎಸ್.ಪಾಟೀಲ್ ಅವರು ಹೇಳಿದ್ದಾರೆ. ಇನ್ನು ಮುಂದಿನ 5 ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ನಗರದಲ್ಲಿ ಅಕ್ಟೋಬರ್‌ನಲ್ಲಿ ಇಲ್ಲಿಯವರೆಗೆ 72 ಮಿಲಿ ಮೀಟರ್‌ ಮಳೆಯನ್ನು ದಾಖಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್‌ನಲ್ಲಿ ಸರಾಸರಿ ಒಟ್ಟು ಮಳೆ 168.3 ಮಿಲಿ ಮೀಟರ್‌ ಆಗಿದ್ದು, ಇದು ಸೆಪ್ಟೆಂಬರ್ ನಂತರ ವರ್ಷದ ಎರಡನೇ ಬಾರಿ ಸುರಿದ ಅತಿ ಹೆಚ್ಚು ಮಳೆಯಾಗಿದೆ. ಇನ್ನು ಇಂದು (ಅಕ್ಟೋಬರ್‌ 14) ಇದೀಗ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಈಗಾಗಲೇ ಭಾರೀ ಮಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ರೈತರು ಸಂಸತಗೊಂಡಿದ್ದಾರೆ. ಮತ್ತೊಂದೆಡೆ ದೊಡ್ಡ ದೊಡ್ಡ ಅವಾಂತರಗಳು ಕೂಡ ಆಗಿವೆ. ಬೆಳಗಾವಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳು ಸಂಭವಿಸಿ ಜನಜೀವನ ಅಸ್ತವ್ಯಸ್ತವಾಗಿತ್ತು.

ಇನ್ನು ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ತಗ್ಗಿದ್ದ ಮಳೆರಾಯನ ಆರ್ಭಟ ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಮತ್ತೆ ಚುರುಕು ಪಡೆದಿದೆ. ಇದೀಗ ಮತ್ತೆ ಮುಂದಿನ ಐದು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+