Karnataka Rains: ಡಿಸೆಂಬರ್ 26ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 23) ಬೆಳಗ್ಗೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣ ಇದೆ. ನಗರದ ಹಲವೆಡೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಚಳಿ ಜೊತೆ ಮಂಜಿನ ವಾತಾವರಣ ಇದ್ದು, ಅದರಲ್ಲೂ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಚಳಿಯ ಪ್ರಮಾಣ ಕಡಿಮೆ ಆಗುತ್ತಿದೆ. ಅಲ್ಲಲ್ಲಿ ಮಂಜಿನ ವಾತಾವರಣ ಇದ್ದರೂ ಇದು ವಾಹನ ಸವಾರರಿಗೆ ಅಷ್ಟೇನು ಅಡ್ಡಿಯಾಗುತ್ತಿಲ್ಲ.
ಇನ್ನು ಇಂದಿನಿಂದ ಅಂದರೆ ಡಿಸೆಂಬರ್ 25ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬೆಳಗ್ಗೆ ಹಾಗೂ ಸಂಜೆ ಚಳಿ ಇರಲಿದ್ದು, ಮಧ್ಯಾಹ್ನದ ವೇಳೆಗೆ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಡಿಸೆಂಬರ್ 26ರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದ.
ಇನ್ನು ರಾಜ್ಯ ರಾಜಧಾನು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ ಇದೆ. ಕೆಲವು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಡಿಸೆಂಬರ್ 25ರ ಬಳಿಕ ನಗರದ ವಾತಾವರಣದಲ್ಲಿ ಸ್ವಲ್ಪ ಏರಿಳಿತ ಆಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ. ನಿನ್ನೆ (ಡಿಸೆಂಬರ್ 22) ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಈ ಬಾರಿ ಅಂದರೆ 2024ರಲಗಲಿ ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು ಬಳಿಕ ಜೂನ್ ಆರಂಭದಲ್ಲಿಯೇ ಕರ್ನಾಟಕಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟು ದೊಡ್ಡ ಸೌಂಡ್ ಮಾಡಿತ್ತು. ಈ ವೇಳೆ ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ.












Click it and Unblock the Notifications