Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ

Karnataka Rain: ಇದೀಗ ರಾಜ್ಯಾದ್ಯಂತ ಮಂಜು, ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಈ ನಡುವೆಯೇ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 25) ಬೆಳ್ಳಂಬೆಳಗ್ಗೆಯೇ ಚಳಿ, ಮಂಜಿನ ನಡುವೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿ ಇರಲಿದ್ದು, ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹೀಗೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

Karnataka Rains Heavy Rainfall Forecast in These districts for next three days from December 25

ಬುಧವಾರ (ಡಿಸೆಂಬರ್ 25) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ, ಬದಲಿಗೆ ಮಧ್ಯಾಹ್ನ ಬಿಸಿಲು, ಬೆಳಗ್ಗೆ ಹಾಗೂ ಸಂಜೆ ಮಂಜಿನ ಜೊತೆ ಚಳಿ ಇರಲಿದೆ ಎನ್ನುವ ಮುನ್ಸೂಚನೆ ಇದೆ.

ಗುರುವಾರ (ಡಿಸೆಂಬರ್‌ 26) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮುನ್ಸೂಚನೆ ಇರುವುದಿಲ್ಲ. ಬದಲಾಗಿದೆ ಚಳಿಯ ಜೊತೆ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ.

ಶುಕ್ರವಾರ (ಡಿಸೆಂಬರ್‌ 27) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಇದೇ ವೇಳೆ ವಿಜಯಪುರ, ಗದಗ ಜಿಲ್ಲೆಗಳ ಕೆಲವು ಭಾಗಗಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ಚಳಿ ಜೊತೆ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಇನ್ನು ಜೂನ್‌ ಆರಂಭವಾಗುತ್ತಿದ್ದಂತೆ ಕರ್ನಾಟಕಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟು ದೊಡ್ಡ ಅವಾತಂರಗಳನ್ನೇ ಸೃಷ್ಟಿಸಿತ್ತು. ಈ ವೇಳೆ ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾದ ಘಟನೆಗಳು ಕೂಡ ನಡೆದಿವೆ.

ಮತ್ತೊಂದೆಡೆ ಮಳೆರಾಯ ಬರವನ್ನೆಲ್ಲ ನೀಗಿಸಿದನಲ್ಲ ಅಷ್ಟು ಸಾಕು. ಆದರೆ ನಷ್ಟ ಪರಿಹಾರದ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಈ ಬಾರಿ ಭಾರೀ ಮಳೆಯಿಂದ ಉತ್ತಮ ಬೆಳೆಗಳೇನೋ ಬಂದಿವೆ. ಆದರೆ, ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಕಾಟದಿಂದ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಲೇ ಇದ್ದಾರೆ. ಇದಕ್ಕೂ ಕೂಡ ಸರ್ಕಾರವೇ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಂತಲೂ ಕೂಡ ರೈತರು ಆಗ್ರಹಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+