Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ನವೆಂಬರ್ 14) ಬೆಳಗ್ಗೆಯಿಂದಲೂ ಇಡೀ ದಿನ ರಾಜ್ಯ ರಾಜಧಾನಿಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಹಾಗೆಯೇ ಇನ್ನುಳಿದ ಜಿಲ್ಲೆಗಳಲ್ಲೂ ಮುಂದಿನ ಮೂರು ದಿನಗಳ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Heavy rainfall forecast in these districts for next three days from November 14

ಎಲ್ಲೆಲ್ಲಿ ಮಳೆ?: ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಹಾವೇರಿ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಮಂಜು ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ: ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ್, ಹಾವೇರಿ, ಕಲಬುರಗಿ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.

ಈ ಭಾರೀ ಮುಂಗಾರು ಮಳೆ ಆರ್ಭಟಿಸಿದ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಕೆಆರ್‌ಎಸ್‌, ಕಬಿನಿ, ಹೇಮಾವತಿ, ಹಾರಂಗಿ, ತುಂಗಭದ್ರಾ, ಭದ್ರಾ, ಆಲಮಟ್ಟಿ, ಘಟಪ್ರಭಾ ಸೇರಿದಂತೆ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಈ ಬಾರಿ ಭರ್ತಿಯಾಗಿವೆ.

ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಮತ್ತೊಂದೆಡೆ ಅನ್ನದಾತರು ಬೆಳೆದ ಬೆಳಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದು, ಅನ್ನದಾತ ಕಂಗಾಲಾಗಿದ್ದ.

ಆದರೆ, ಈ ಬಾರಿ ಅಂದರೆ, 2024ರ ಜೂನ್ ಆರಂಭವಾಗುತ್ತಿದ್ದಂತೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರಿಂದ ಬಹುತೇಕ ಜಲಾಮೂಗಳು ಭರ್ತಿಯಾಗಿದ್ದು, ಬೆಳೆಗಳು ಉತ್ತಮವಾಗಿ ಬಂದಿವೆ. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮತ್ತೆ ಮರುಕಳಿಸಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+