Karnataka Rains: ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಈ ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಮುಂದಿನ ಮುರ್ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಅಲ್ಲದೆ ಈಗಲೂ ಈ ಭಾಗದಲ್ಲಿ ಭಾರೀ ಮಳೆ ಮುಂದುವರೆದ ಕಾರಣ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟಕ್ಕೆ ನದಿ-ಹಳ್ಳ ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಮುಂದಿನ ಮೂರ್ನಾಲ್ಕು ದಿನಗಳ ಕಾಳ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಾಕ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ದಾವಣಗೆರೆ, ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಕಲಬುರಗಿ, ಬೀದರ್, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 3-4 ದಿನ ಕಾಲ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ತಣ್ಣನೆಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 11, 12 ಹಾಗೂ 13 ರಂದು ಬಿರುಗಾಳಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications