Karnataka Rains: ಕೆಲವೇ ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಮಾತ್ರ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಹಾಗೆಯೇ ಇಂದು (ಆಗಸ್ಟ್‌ 11) ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ನೋಡಿ.

ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಕೆಲವೆಡೆ ರಸ್ತೆಗೆ ಗುಡ್ಡ ಕುಸಿದು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದರೆ, ಇನ್ನೂ ಕೆಲವು ಭಾಗಗಳಲ್ಲಿ ಗುಡ್ಡದ ಮಣ್ಣು ರೈಲ್ವೇ ಹಳಿಗೆ ಕುಸಿದು ರೈಲು ಸೇವೆ ರದ್ದಾದ ಘಟನೆಗೆಳು ನಡೆದಿವೆ.

Karnataka Rains Heavy rainfall forecast in these districts in few hours on August 11th

ಅಷ್ಟೇ ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ನದಿ, ಕಳ್ಳ-ಕೊಳ್ಳಗಳು ಅಪಾಯದ ಮಟ್ಟ ತುಂಬಿ ಹರಿದು ಜನಜೀವನ ಅಸ್ತವ್ಯಸ್ಥವಾಗಿದೆ. ಮತ್ತೊಂದೆಡೆ ಈಗಾಗಲೇ ಪ್ರಮುಖ ಜಲಾಶಯಗಳು ಕೂಡ ತುಂಬಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಇನ್ನು ಕೆಲವೇ ಗಂಟೆಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ, ಬೆಳಗಾವಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಾಗೆಯೇ ದಾವಣಗೆರೆ ಜಿಲ್ಲೆಯ ಹಲವೆಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಬೀದರ್, ಕೋಲಾರ, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ನದಿ, ಕೆರೆ-ಕಟ್ಟೆಗಳು, ಜಲಾಶಯಗಳು ಬಹುತೇಕ ಬತ್ತಿಹೋಗಿದ್ದವು. ಇದರಿಂದ ರೈತರು ಬೆಳೆದ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಸುಟ್ಟು ಹೋಗಿದ್ದವು. ಆದರೆ ಈ ಬಾರಿ ಜೂನ್‌ ಆರಂಭವಾಗುತ್ತಿದ್ದಂತೆ ಮುಂಗಾರು ಚುರುಕು ಪಡೆದಿದ್ದು, ಹಲವು ಜಿಲ್ಲೆಗಳಲ್ಲಿ ನದಿಗಳು, ಪ್ರಮುಖ ಜಲಾಶಯಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದರೆ, ಇನ್ನೂ ಕೆಲವು ಭಾಗಗಳಲ್ಲಿ ತುಂಬುವ ಹಂತವನ್ನು ತಲುಪಿವೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಹೆಚ್ಚಿಸಿದಂತಾಗಿದೆ.

ಹಾಗೆಯೇ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರೆದರೆ ನಮ್ಮ ಗತಿ ಏನು ಎನ್ನುವ ಆತಂಕ ನದಿಪಾತ್ರದ ಜನರು, ಹಾಗೂ ಜಲಾಶಯಗಳ ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಮತ್ತೊಂದೆಡೆ ಈ ಬಾರಿಯಾದರೂ ಮಳೆರಾಯ ಕರುಣೆ ತೋರಿದ್ದಾನಲ್ಲಾ ಎನ್ನುವ ಸಂತಸ ಅನ್ನದಾತರದ್ದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+