Karnataka Rains: ಕೆಲವೇ ಗಂಟೆಗಳಲ್ಲಿ ಈ ರಾಜ್ಯದ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ ಆರಂಭದಿಂದ ಮುಂಗಾರು ಮಳೆ ಚುರುಕು ಪಡೆದಿತ್ತು. ಆದರೆ ಬರಬರುತ್ತಾ ಈ ತಿಂಗಳ ಕೊನೆಯಲ್ಲಿ ಮಳೆರಾಯನ ಆರ್ಭಟ ದಿಢೀರ್ ತಗ್ಗಿದ್ದು, ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದುದೆ. ಇನ್ನೂ ಇಂದು (ಜುಲೈ 01) ಕೆಲವೇ ಕ್ಷಣಗಳಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ನೀಡಿ ಮಳೆರಾಯನ ಆರ್ಭಟಿಸುತ್ತಿದ್ದಾನೆ. ಹಾಗೆಯೇ ಇಂದು ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ರಾತ್ರಿ ವೇಳೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾರೆ, ದಾವಣಗೆರೆ, ಮೈಸೂರು, ಚಾಮರಾಜನಗರ, ಬಾಗಲಕೋಟೆ, ತುಮಕೂರು, ಧಾರವಾಡ ಸೇರಿದಂದರೆ ಹಲವು ಜಿಲ್ಲೆಗಲ್ಲಿ ಸಾಧಾರಣ ಮಳೆಯಾಗಿದೆ.
ಇದೀಗ ಹಲವೆಡೆ ದಿಢೀರ್ ಮಳೆ ಪ್ರಮಾಣ ತಗ್ಗಿದ್ದರೆ, ಕೆಲವೆಡೆ ಭಾರೀ ಮಳೆಯಾಗುತ್ತಿದೆ. ಇನ್ನೂ ಹಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಇದರ ನಡುವೆಯೂ ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಬಾಗಲಕೋಟೆ, ಬೀದರ್, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ತುಮಕೂರು, ಧಾರವಾಡ, ಕೋಲಾರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಸೇರಿದಂತೆ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎನ್ನುವ ಮುನ್ಸೂಚನೆ ಇದೆ.
ಕೊಡಗಿನಲ್ಲಿ ಮುಂದುವರೆದ ಮಳೆ: ಕೊಡಗಿನಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆ ಆಗುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟದಲ್ಲೂ ಏರಿಕೆ ಆಗುತ್ತಲೇ ಇದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಅಂಡರ್ ಪಾಸ್‌ನಲ್ಲಿ ನೀರು ನಿಂತು ಚರಂಡಿಯಂತೆ ಮಾರ್ಪಟ್ಟಿದೆ. ನಿನ್ನೆ ಸುರಿದ ಮಳೆಗೆ ಅಂಡರ್ ಪಾಸ್ ಜಲಾವೃತವಾಗಿದ್ದು, ವಾಹನ ಸವಾರರು ನರದಾಡಿದ ಘಟನೆ ನಡೆದಿದೆ.
ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಅದರಲ್ಲೂ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳ ಆಗಿದ್ದು, ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿದೆ.
ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿಯಿರುವ ಸೇತುವೆ ಜಲಾವೃತಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಹಿನ್ನೆಲೆ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಕೆಂಡಕಾರುತ್ತಿದ್ದಾರೆ.












Click it and Unblock the Notifications