Karnataka Rains: ಕೆಲವೇ ಗಂಟೆಗಳಲ್ಲಿ ಈ ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆ

Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದುದ್ದು, ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು ಇನ್ನೂ ಮುಂದಿನ ಮೂರು ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನಿನ್ನೆ (ಜುಲೈ 12) ಸಂಜೆಯಾಗುತ್ತಿದ್ದಂತೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದು, ರಸ್ತೆಗಳು ಚರಂಡಿಯಂತೆ ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಇನ್ನು ಇಂದು (ಜುಲೈ 13) ಕೂಡ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೇ ಗಂಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಸಹ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಯಿರಿ.

Karnataka Rains Heavy rainfall forecast in these districts in few hours on july 13

ಕರಾವಳಿ, ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ, ಬೀದರ್‌, ದಾವಣಗೆರೆ, ತುಮಕೂರು, ಕೋಲಾರ, ಕಲಬುರಗಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವತಣ ನಿರ್ಮಾಣವಾಗಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಒಟ್ಟಿನಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳ ಕೆಲವೆಡೆ ವ್ಯಪಾಕವಾಗಿ ಭಾರೀ ಮಳೆಯಾದರೆ, ಇನ್ನೂ ಕೆಲವೆಡೆ ಅಲ್ಲಲ್ಲಿ ಚದುರಿದಂಯೆ ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+