Karnataka Rains: ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ತನ್ನ ಆರ್ಭಟವನ್ನು ಮುಂದುವರೆಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಅಲ್ಲದೆ ನದಿ ಕೆರೆ-ಕಟ್ಟೆಗಳು ತುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದರೆ, ಪ್ರಮುಖ ಜಲಾಶಯಗಳಲ್ಲೂ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಇನ್ನೂ ಇಂದು (ಜುಲೈ 17) ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯಲಿದ ಎನ್ನುವ ಮುನ್ಸೂಚನೆ ಇದೆ.
ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಿಂದ ನದಿ ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತವೆ. ಅಲ್ಲದೆ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕಲಬುರಗಿ, ಕೋಲಾರ, ತುಮಕೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ.

ಹಾಗೆಯೇ ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ ಸೇರಿದಂತೆ ಹಲವು ಜಿಲ್ಲಗಳಲ್ಲಿ ಭಾರೀ ಮಳಡ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಧಾರವಾಡ, ಹುಬ್ಬಳ್ಳಿ, ಬೆಂಗಳೂರು, ತುಮಕೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನೂ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.
ಭಾರೀ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮ, ಜಲಾಶಯಗಳಿಂದ ನದಿಗಳಿಗೆ ನೀರು ಹರಿಸಲಾಗುತ್ತಿದೆ. ಇನ್ನೂ ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಆಯಾ ಜಿಲ್ಲಾಧಿಕಾರಿಗಳು ಜನರಿಗೆ ಸೂಚನೆ ನೀಡುತ್ತಲೇ ಇದ್ದಾರೆ.
ಹಾಗೆಯೇ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಸೇರಿದಂತೆ ಶಾಲಾ-ಕೇಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications