Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುನಾಮಿ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಈ ಭಾಗಗಳಲ್ಲಿ ಇಂದು (ಜುಲೈ 19) ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ.

Karnataka Rains Heavy rainfall forecast in these districts in few hours on july 19th know details

ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ದಾವಣಗೆರೆ, ಬೆಳಗಾವಿ ಸೇರಿದಂತೆ ಹಕವು ಜಿಲ್ಲಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದ್ದು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕಲಬುರಗಿ, ಧಾರವಾಡ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

ಇನ್ನೂ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಭಾರೀ ಮಳೆಯಿಂದ ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿದ್ದರೆ, ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣವು ಕೂಡ ಹೆಚ್ಚಾಗುತ್ತಲೇ ಇದೆ.

ಕೆಆರ್‌ಎಸ್‌, ಹೇಮಾವತಿ, ಹಾರಂಗಿ, ತುಂಗಭದ್ರಾ, ಭದ್ರಾ, ಕಬಿನಿ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಈ ಜಲಾಶಯಗಳ ನದಿ ತೀರಗಳ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಇನ್ನು ಆಯಾ ಜಿಲ್ಲಾಡಳಿತಗಳು ಕೂಡ ಜನರಿಗೆ ನದಿ ತೀರ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತಹ ಕೆಲಸವನ್ನು ಮಾಡುತ್ತಿವೆ.

ಕಳೆದ ಬಾರೀ ಮುಂಗಾರು ಕೈಕೊಟ್ಟಿದ್ದರಿಂದ ರೈತರು ಬೆಳೆದ ಬೆಳಗಳೆಲ್ಲ ನೆಲಕಚ್ಚಿದ್ದವು. ಆದರೆ ಈ ಬಾರಿ ಜೂನ್‌ ಆರಂಭವಾಗುತ್ತಿದ್ದಂತೆ ಮುಂಗಾರು ಚುರುಕು ಪಡೆದಿರುವ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಅದರಲ್ಲೂ ಕರಾವಳಿ ತೀರದ ಪ್ರದೇಶದಲ್ಲಂತೂ, ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಈಗಾಗಲೇ ಭಾರೀ ಮಳೆಯಿಂದ ಹಲವೆಡೆ ರಸ್ತೆ, ಹೆದ್ದಾರಿಗಳು ಜಲಾವೃತವಾಗಿರುವ ಹಿನ್ನೆಲೆ ವಾಹನಗಳನ್ನು ಪರ್ಯಾಯ ಮಾರ್ಗವಾಗಿ ಬೇರೆಡೆಗೆ ತಿರುಗಿಸಲಾಗುತ್ತಿದೆ.

ಪಶ್ಚಿಮ ಘಟ್ಟದ ಪ್ರದೇಶದಲ್ಲಿ ಬೆಟ್ಟ-ಗೊಡ್ಡಗಳು ಕುಸಿದು ಪ್ರವಾದ ವಾತಾವರಣವೇ ನಿರ್ಮಾಣವಾಗಿದೆ. ಅಲ್ಲದೆ, ಮನೆ-ಮಠಗಳು ನೀರಿನಲ್ಲಿ ಕೊಚ್ಚಿಹೋದ ಘಟನೆಗಳು ನಡೆದಿವೆ. ಇನ್ನೂ ಮಲೆನಾಡಿನ ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆ ಜನರು ಮನೆಯಿಂದ ಹೊರಗಡೆ ಬರದಂತಹ ವಾತಾವತಣ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+