Karnataka Rains: ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ರಹಿತ ಭಾರೀ ಮಳೆ ಮುನ್ಸೂಚನೆ
Karnataka Rains: ಜೂನ್ ಆರಂಭದಿಂದಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಎಂಟ್ರಿ ಕೊಟ್ಟಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಇನ್ನು ಜೂನ್ 19ರಿಂದ ಮುಂಗಾರು ಮತ್ತಷ್ಟು ಚುರುಕು ಪಡೆದಿದ್ದು, ಹಲವೆಡೆ ಅಬ್ಬರದ ಮಳೆಯಾಗುತ್ತಿದೆ. ಇನ್ನು ಇಂದು (ಜೂನ್ 20) ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಭಾರೀ ಮಳೆ ಸುರಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಜಲಮೂಗಳಿಗೆ ಜೀವ ಬಂದಂತಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಾಹಸ ಹೆಚ್ಚಾದಂತಾಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಟ ಮಟ ಮಧ್ಯಹ್ನವೇ ಅಬ್ಬರದ ಮಳೆಯಾಗಿದ್ದು, ರಾತ್ರಿ ವೇಳೆಗೆ ಮತ್ತಷ್ಟು ಮಳೆ ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಚಿಕ್ಕಮಗಳೂರು, ದಾವಣಗೆರೆ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಧಾರವಾಡ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದ್ದು, ಮುಂದಿನ ದಿನಗಳಲ್ಲೂ ಮಳೆರಾಯನ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಹಾಗೆಯೇ ಇನ್ನೂ ಇಂದು ಕೆಲವೇ ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೀದರ್, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಅಲ್ಲದೆ, ಮುಂದಿನ 5 ದಿನಗಳಲ್ಲಿ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications