Karnataka Rains: ಕೆಲವೇ ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುಂದುವರೆದಿದೆ. ಇನ್ನೂ ಕೆಲವೆಡೆ ಸಾಧಾರಣ ಮಳೆಯಾದರೆ, ಇನ್ನುಳಿದ ಕಡೆಗಳಲ್ಲಿ ಮಳೆಯಿಲ್ಲದೆ ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇದರ ನಡುವೆಯೂ ಇಂದು (ಜೂನ್ 28) ಇನ್ನೂ ಕೆಲವೇ ಕ್ಷಣಗಳಲ್ಲಿ ಬಿರುಗಾಳಿ ಸಹಿತ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ವರುಣಾರ್ಭಟ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುಗು ಕೊಟ್ಟು ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಇಂದು ಸಹ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಹಲವು ಜಿಲ್ಲೆಗಳಲ್ಲಿಯೂ ಸಹ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದರೆ, ಇನ್ನೂ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಶುರು ಮಾಡುವ ಸಾಧ್ಯತೆಯಿದ್ದು, ಅದರಲ್ಲೂ ಕರಾವಾಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ದಕ್ಷಿಣ ಒಳನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆ ಬೀಳುವ ಸಾಧ್ಯತೆ ಇದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆ ಸುರಿಯುವ ಎಚ್ಚರಿಕೆಯನ್ನು ನೀಡಲಾಗಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಭಾರೀ ಮಳೆ ಹಿನ್ನೆಲೆ ಒಳನಾಡು ಪ್ರದೇಶಗಳಿಗೆ ಇಂದು ಕೂಡ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಬಿರುಗಾಳಿ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಭಾಗದ ಮೀನುಗಾರರಿಗೆ ಸುಮುದ್ರದ ಆಳಕ್ಕೆ ಇಳಿದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಈಗಾಗಲೇ ಮಳೆರಾಯನ ಹಲವೆಡೆ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಮುಂದಿನ ಒಂದು ವಾರಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇದೆ.












Click it and Unblock the Notifications