Karnataka Rains: ಕೆಲವೇ ಕ್ಷಣಗಳು ಬಾಕಿ.. ರಾಜ್ಯದ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದು, ಕೆಲವೇ ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬಿಬ್ಬೆರೆಯುತ್ತಿದ್ದಾರೆ. ಹಾಗೆಯೇ ಇಂದು (ಆಗಸ್ಟ್‌ 12) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ಕಣ್ಣಾಡಿಸಿ.

ಇಷ್ಟು ದಿನ ಮಳೆರಾಯ ಬಿಡುವು ನೀಡಿದ್ದು, ಇದೀಗ ಮತ್ತೆ ಹಲವು ಜಿಲ್ಲೆಗಳಲ್ಲಿ ತನ್ನ ಆರ್ಭಟವನ್ನು ಮುಂದುವರೆಸಿದ್ದಾನೆ. ಹಾಗೆಯೇ ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Karnataka Rains Heavy rainfall forecast in these districts in few moments on August 12th

ಕೇರಳದ ಭಾಗದಲ್ಲಿ ಮತ್ತೆ ಮಳೆ ಚುರುಕು ಪಡೆಯಲಿದ್ದು, ಇದರ ಪ್ರಭಾವ ಕರ್ನಾಟಕದ ದಕ್ಷಿಣ ಒಳನಾಡಿನ ಮೇಲೂ ಬೀರಲಿದೆ ಎನ್ನುವ ಮುನ್ಸೂನೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಬೆಂಗಳುರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಹಾಗೆಯೇ ಮಂಡ್ಯ, ರಾಮನಗರ, ಹಾಸನ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಹಲವೆಡೆ ವ್ಯಾಪಕ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 100ಕ್ಕಿಂತ ಹೆಚ್ಚು ಮಿಲಿ ಮೀಟರ್‌ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಈ ಜಿಲ್ಲೆ ಸೇರಿದಂತೆ, ಬೀದರ್, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಮಳೆರಾಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಕೆಲವೆಡೆ ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿದು ರಸ್ತೆ ಸಂಚಾರ ಬಂದ್‌ ಆಗಿ ವಾಹನ ಸವಾರರು ಪರದಾಡಿದ್ದು, ಇನ್ನೂ ಕೆಲವು ಕಡೆಗಳಲ್ಲಿ ರೈಲ್ವೆ ಹಳಿಗಳ ಮೇಲೆ ಮಣ್ಣು ಕುಸಿದು ರೈಲು ಸಂಚಾರ ರದ್ದಾದ ಘಟನೆಗಳು ನಡೆದಿವೆ.

ಭಾರೀ ಮಳೆಯಿಂದ ಹಲವು ಜಲಾಶಯಗಳು ತುಂಬಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಾದ ನೀರನ್ನು ನದಿಗಳಿಗೆ ಹರಿಸಲಾಗಿದ್ದು, ಇದರಿಂದ ನದಿ ಪಾತ್ರದ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಹಾಗೆಯೇ ಇನ್ನೂ ಕೆಲವು ಡ್ಯಾಂಗಳು ತುಂಬುವ ಹಂತ ತಲುಪಿದ್ದು, ಇದರಿಂದ ಅಲ್ಲಿನ ಅಕ್ಕಪಕ್ಕದ ಜನರಿಗೆ ಆತಂಕ ಶುರುವಾಗಿದೆ. ಒಟ್ಟಿನಲ್ಲಿ ಈ ಭಾರೀ ಸುರಿದ ಮುಂಗಾರು ಮಳೆಯಿಂದ ಜಲಮೂಲಗಳು ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಸಂತಸ ಮೂಡಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+