Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿರುವ ಹಿನ್ನೆಲೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಹಾಗೆಯೇ ಇಂದು (ಜುಲೈ 04) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಭಾಗಗಳಿಗೆ ಭಾರೀ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ನೀಡಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಇಂದು ಸಹ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಿಸಿ ಬೊಬ್ಬರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಅಲ್ಲದೇ, ಈ ಭಾಗಗಳಲ್ಲಿ ನದಿಗಳು, ಜಲಪಾತಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.
ಹಾಗೆಯೇ ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ಕರಾವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಹೆಚ್ಚಿದೆ ಎನ್ನುವ ಮುನ್ಸೂಚನೆ ಇದೆ. ಇನ್ನೂ ಭಾರೀ ಮಳೆ ಮುಂದುವರೆದರೆ, ಇನ್ನೂ ಏನೆಲ್ಲ ಅನಾಹುತಗಳು ಸಂಭವಿಸುತ್ತವೆಯೋ ಎನ್ನುವ ಆತಂಕದಲ್ಲಿ ಈ ಭಾಗಗಳ ಜನರಿದ್ದಾರೆ.
ದಾವಣಗೆರೆ, ತುಮಕೂರು, ಬಾಗಲಕೋಟೆ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಒಟ್ಟಿನಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರಮುಖ ಜಲಾಶಯಗಳು, ಜಲಪಾತಗಳು, ನದಿಗಳಿಗೆ ಜೀವ ಕಳೆ ಬಂದಂತಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಮತ್ತೊಂದೆಡೆ ಮಳೆರಾಯನ ಆರ್ಭಟದಿಂದ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿದ್ದು, ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ, ಭಾರೀ ಮಳೆಯಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಆಯಾ ಜಿಲ್ಲಾಡಳಿತಗಳಿದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications