Karnataka Rains: ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಅಬ್ಬರದ ಮಳೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಬ್ಬರದ ಮಳೆಯಿಂದಾಗಿ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಜುಲೈ 12) ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಭಾರೀ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಬಿಡುವು ನೀಡಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಇನ್ನು ಇಂದು ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಧಾರಕಾರಣ ಮಳೆಯಾಗಿದ್ದು, ಪರಿಣಾಮ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಹಾಗೆಯೇ ರಾತ್ರಿ ವೇಳೆಗೆ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಇನ್ನುಳಿದಂತೆ ಹಲವು ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಹಾಗೆಯೇ ಇಂದು ಕೂಡ ಇನ್ನೂ ಕಲವೇ ಕ್ಷಣಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರಾವಳಿ ಭಾಗಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾರವಾರ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದ್ದು, ದಾವಣಗೆರೆ, ಬೀದರ್, ಕಲಬುರಗಿ, ಚಾಮರಾಜನಗರ, ರಾಮನಗರ ತುಮಕೂರು, ಚಿತ್ರದುರ್ಗ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಭಾರೀ ಮಳೆಯಿಂದಾಗಿ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಲಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications