Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರಯ ಚುರುಕು ಪಡೆದಿದೆ. ಈಗಾಗಲೇ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಇಂದು (ಜುಲೈ 20) ಇನ್ನೂ ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಅಬ್ಬರದ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಮಾಹಿತಿ ಇಲ್ಲಿದೆ ತಿಳಿಯಿರಿ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟದಕ್ಕೆ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದ್ದು, ಈ ಭಾಗದ ಜನರು ಜೀವವನ್ನು ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕೇಲೇಜು, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ದಾವಾಣಗೆರೆ, ಬಾಗಲಕೋಟೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಇನ್ನು ಅಬ್ಬರದ ಮಳೆತಯಿಂದ ದೊಡ್ಡ ದೊಡ್ಡ ಅನಾಹುತಗಳು ಸಂಭವಿಸಿ ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಅಲ್ಲಿನ ಮಣ್ಣು ಹೆದ್ದಾರಿಗೆ ಜರುಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಅಲ್ಲದೆ, ಕೆಲವೆಡೆ ರಸ್ತೆ ಸಂಪರ್ಕಗಳು ಬಂದ್ ಆಗಿದ್ದು, ಪ್ರವಾಸಿಗರಿಗೆ ಪ್ರವಾಸಿ ತಾಣಗಳಿಗೆ ಬರದಂತೆ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ಹೇರಾಲಾಗಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಚುರುಕು ಪಡೆದ ಪರಿಣಾಮ ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದು ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕೆಲಸಗಳು ನಡೆಯುತ್ತಿವೆ.
ಕಳೆದ ಬಾರಿ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರೈತರು ಬೆಳೆದ ಬೆಳೆಗಳು ನೆಲಕಚ್ಚಿದ್ದವು. ಇನ್ನೂ ಚಾನೆಲ್, ನದಿ ತೀರದ ಪ್ರದೇಶಗಳ ರೈತರು ಬೆಳೆದ ಬೆಳೆಗಳು ಮಾತ್ರ ಅಷ್ಟೋ ಇಷ್ಟೋ ಕೈಸಿಕ್ಕಿದ್ದವು. ಇನ್ನುಳಿದಂತೆ ಬಹುತೇಕ ಜಿಲ್ಲೆಗಳ ರೈತರ ಬೆಳೆಗಳು ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದವು.
ಆದರೆ ಈ ಬಾರಿ ಅಂದರೆ 2024ರ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಬಹುತೇಕ ಜಿಲ್ಲೆಗಳಲ್ಲಿ ಚುರುಕು ಪಡೆದು ರೈತರ ಸಂತಸಕ್ಕೆ ಕಾರಣವಾಗಿದೆ. ಅಲ್ಲದೆ, ಇದೀಗ ರಾಜ್ಯದ ಹಲವು ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಇನ್ನು ಮಳೆ ಮುಂದುವರೆದ ಹಿನ್ನೆಲೆ ನದಿ ತೀರದ ನಿವಾಸಿಗಳಿಗೆ ಪ್ರವಾಹದ ಭೀತಿ ಎದುರಾದಂತಾಗಿದೆ.












Click it and Unblock the Notifications