Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಕೆಲವೇ ಕ್ಷಣಗಳಲ್ಲಿ ಸುರಿಯಲಿದೆ ಬಿರುಗಾಳಿ ಮಳೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಜುಲೈ 06) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ನೀಡಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಇಂದು ಮೋಡ ಕವಿದ ವಾತಾವರಣ ಇರಲಿದ್ದು ರಾತ್ರಿ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಕೆಲವು ಜಿಲ್ಲೆಗಳಲ್ಲಿ ಧಾರಾಕರಣ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ.

ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಹಲವು ಭಾಗಗಳಲ್ಲಿ ಭಾರೀ ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ.
ಯಾವೆಲ್ಲಾ ಜಿಲ್ಲೆಗಳಿಗೆ ಮಳೆ?: ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ. ಹಾಗೆಯೇ ಮತ್ತೊಂದೆಡೆ, ಚಾಮರಾಜನಗರ, ಕೋಲಾರ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಧಾರವಾಡ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಭಾಗದ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಇನ್ನೂ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು-ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಅಲ್ಲದೆ, ರಾಜ್ಯದ ಪ್ರಮುಖ ಜಲಾಶಯಗಳಿಗೂ ಜೀವಕಳೆ ಬಂದಂತಾಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಹೆಚ್ಚಾದಂತಾಗಿದೆ. ಮತ್ತೊಂದೆಡೆ ನದಿ ಪಾತ್ರದಲ್ಲಿ ವಾಸ ಮಾಡುವ ಜನರು ಪ್ರವಾಹದ ಭೀತಿಯಿಂದ ಜೀವವನ್ನು ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.












Click it and Unblock the Notifications