Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟಕ್ಕೆ ಕೆರೆ-ಕಟ್ಟೆಗಳು ತುಂಬಿ ಹರಯುತ್ತಿದ್ದು, ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿರುವ ಘಟನೆಗಳು ನಡೆದಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಮಾತ್ರ ರಣಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಮಾಹಿತಿ ಇಲ್ಲಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ನೀಡಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಹಾಗೆಯೇ ಇಂದು (ಜುಲೈ 07) ರಾತ್ರಿ ವೇಳೆಗೆ ನಗರದಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಕರಾವಳಿ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಈ ಭಾಗದಲ್ಲಿ ಪ್ರಳಯದಂತಹ ವಾತಾವರಣ ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯವಸ್ತವಾಗಿದೆ.

ಎಲ್ಲೆಲ್ಲಿ ಭಾರೀ ಮಳೆ?: ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಬೆಳಗಾವಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟಕ್ಕೆ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಜುಲೈ 07) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮತ್ತಷ್ಟು ಚುರುಕಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಎಲ್ಲೆಲ್ಲಿ ಸಾಧಾರಣ ಮಳೆ?: ಇನ್ನು ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಕೋಲಾರ, ಮಂಡ್ಯ, ರಾಮನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಬಹುತೇಕ ಕೆರೆ-ಕಟ್ಟೆ-ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳೆದ ವರ್ಷ ಅಂದರೆ 2023ರಕ್ಕು ಈ ವೇಳೆಗೆ ಮುಂಗಾರು ಕೈಹಿಡಿಯಲಿದೆ ನಂಬಿಕೊಂಡು ಎಂದು ರೈತರು ಲಕ್ಷಗಟ್ಟಲೇ ಸುರಿದು ಬೀಜ, ಗೊಬ್ಬರ ತಂದು ಬಿತ್ತನೆ ಮಡಿದ್ದರು. ಆದರೆ, ಮುಂಗಾರು ಕೈಕೊಟ್ಟ ಹಿನ್ನೆಲೆ ರೈತರ ಸಂಕಷ್ಟದಲ್ಲಿ ಸಿಲುಕಿಬಿಟ್ಟರು. ಇನ್ನೂ ಕೆಲವರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಡೆದವು.
ಇನ್ನೂ ಈ ಬಾರಿ ಸರಿಯಾದ ಸಮಯಕ್ಕೆ ಜೂನ್ ಆರಂಭದಿಂದಲೇ ಮುಂಗಾರು ಚುರುಕು ಪಡೆದ ಹಿನ್ನೆಲೆ ಬಾಡಿ ಹೋಗಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡುವಂತೆ ಆಗಿದೆ.












Click it and Unblock the Notifications