Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Karnataka Rains: ಜೂನ್ ಆರಂಭದಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದ್ದು, ಇದೀಗ ಮಳೆರಾಯ ಮೂರನೇ ವಾರ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಮುನಿಸಿಕೊಂಡಿರುವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಮುಂದುವರೆದಿದೆ. ಮತ್ತೊಂದೆಡೆ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ವರುಣ ಆರ್ಭಟ ಮುಂದುವರೆಸಿದ್ದಾನೆ. ಹಾಗೆಯೇ ಇನ್ನೂ ಕಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ಕೊಟ್ಟು ಮಳೆಯಾಗುತ್ತಿದೆ. ಆದರೆ ಜೂನ್ ಮೊದಲ ವಾರಕ್ಕೆ ಹೋಲಿಕೆ ಮಾಡಿದರೆ, ನಗರದಲ್ಲಿ ಇದೀಗ ಮಳೆರಾಯನ ಆರ್ಭಟ ಕಡಿಮೆಯಾಗಿದೆ. ಆದರೆ ಇಂದು (ಜೂನ್ 23) ಇನ್ನು ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಇನ್ನು ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ದಾವಣಗೆರೆ, ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಮತ್ತೊಂದೆಡೆ ನೋಡುವುದಾದೆ, ಕಳೆದ ಬಾರಿ ಮುಂಗಾರು ಕೈಕೊಟ್ಟ ಹಿನ್ನೆಲೆ ಬಹುತೇಕ ಕೆರೆ-ಕಟ್ಟೆಗಳು, ಹಲವು ಪ್ರಮುಖ ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಆದರೆ ಈ ಬಾರಿ ಮೇ ತಿಂಗಳ ಮಧ್ಯದಲ್ಲೇ ಮಳೆರಾಯ ಆರ್ಭಟಿಸಿದ್ದರಿಂದ ಅನೇಕ ಜಿಲ್ಲೆಗಳಲ್ಲಿ ಜಲಮೂಲಗಳಿಗೆ ಜೀವಕಳೆ ಬಂದಂತಾಗಿತ್ತು.
Thunderstorm with Lightning is very likely to occur at isolated places over Bidar, Vijayapura, Dakshina Kannada, Kalaburagi, Udupi, Yadagiri in the next 3 hours
— Karnataka Weather (@Bnglrweatherman) June 23, 2024
Issued by: IMD Bengaluru
Issued on: 23 Jun, 16:30
Validity Time: 23 Jun, 19:30#KarnatakaRains pic.twitter.com/ZJ6BnsXuai
ಹಾಗೆಯೇ ಜೂನ್ ಆರಂಭದಿಂದ ಮುಂಗಾರು ಮಳೆ ಚುರುಕು ಪಡದಿದ್ದು, ಬಹುತೇಕ ಜಲಾಶಯಗಳ ಒಳಹರಿವು ಹೆಚ್ಚಾಗತೊಡಗಿತು. ಆದರೆ ಇದೀಗ ಜೂನ್ ಮೂರನೇ ವಾರದಲ್ಲಿ ಮಾತ್ರ ಮಳೆ ತಗ್ಗಿದ್ದು, ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಮುಂದುವರೆದಿದೆ. ಇದರಿಂದ ಇದೀಗ ಬಿತ್ತನೆ ಮಾಡಿದ ರೈತರಲ್ಲಿ ಆತಂಕ ಶುರುವಾಗಿದೆ.
ಇನ್ನು ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮತ್ತೆ ಮುಂಗಾರು ಚುರುಕು ಪಡೆದರೆ, ಜಲಮೂಲಗಳಿಗೆ ನೀರು ಬುರುವುದಲ್ಲದೆ, ಕೃಷಿ ಬೆಳೆಗಳು ಸಹ ಉತ್ತಮವಾಗಿ ಬರಲಿದೆ. ಇದು ನಿಜವಾದರೆ, ರೈತರ ಮುಖದಲ್ಲಿ ಕಳೆದುಹೋಗಿದ್ದ ಮಂದಹಾಸ ಮತ್ತೆ ಮೂಡುವುದರಲ್ಲಿ ಯಾವುದೇ ಅನುಮಾನವಿಲ್ಲ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications