Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಕಂಡು ಕೇಳರಿಯದಷ್ಟು ಮಳೆ: IMD ಮುನ್ಸೂಚನೆ

Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಇನ್ನು ಇದಿನಿಂದ ಇನ್ನೂ ಮೂರು ದಿನಗಳ ಕಾಲವೂ ಹಲವು ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ಕೊಟ್ಟು ಮಳೆರಾಯ ಅಬ್ಬರಿಸುತ್ತಿದ್ದಾನೆ. ಇನ್ನು ನಗರದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅನಾಹುತಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಜೂನ್‌) ಸಹ ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ನೀಡಿದೆ.

Karnataka Rains Heavy rainfall forecast in these districts in few moments on june 27

ಈಗಾಗಲೇ ಚಿಕ್ಕಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದಾನೆ. ಹಾಗೆಯೇ ಇಂದು ಇನ್ನೂ ಕೆಲವೇ ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮತ್ತೊಂದೆಡೆ ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಅಲ್ಲದೆ ಮತ್ತೊಂದೆಡೆ ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು (ಜೂನ್‌ 27) ಮಳೆ ಸುರಿಯಲಿದ ಎನ್ನುವ ಮುನ್ಸೂನೆ ಇದೆ.

ಜಿಲ್ಲೆವಾರು ಗರಿಷ್ಠ ಮಳೆ ವರದಿ

* ಉಡುಪಿ: 196 ಮಿಲಿ ಮೀಟರ್‌
* ದಕ್ಷಿಣ ಕನ್ನಡ: 167.5 ಮಿಲಿ ಮೀಟರ್‌
* ಉತ್ತರ ಕನ್ನಡ: 153.5 ಮಿಲಿ ಮೀಟರ್‌
* ಕೊಡಗು: 119 ಮಿ.ಮೀಟರ್‌
* ಹಾಸನ: 100 ಮಿ.ಮೀಟರ್‌
* ಶಿವಮೊಗ್ಗ: 84.5 ಮಿ.ಮೀಟರ್‌
* ಚಿಕ್ಕಮಗಳೂರು: 77 ಮಿ.ಮೀಟರ್‌

ಇನ್ನು ಮುಂದಿನ ಮೂರು ದಿನಗಳ ಕಾಲ ಅಂದರೆ ಜೂನ್‌ 30ರ ವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅದರಲ್ಲೂ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಕೊಡಗು ಭಾಗಗಳಲ್ಲಿ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚಯನ್ನೂ ನೀಡಿದೆ.

2024ರ ಜೂನ್ 1-26ವರೆಗೆ ರಾಜ್ಯದಲ್ಲಿ 2023ಕ್ಕೆ ಹೋಲಿಸಿದರೆ ಶೇಕಡ 3ರಷ್ಟು ಮುಂಗಾರು ಮಳೆ ಪ್ರಮಾಣ ಹೆಚ್ಚಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 115 ಮಿಲಿ ಮೀಟರ್‌ನಷ್ಟು ಪ್ರಮಾಣದಲ್ಲಿ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದ ಪರಿಣಾಮ, ಅವಾಂತರಗಳೇ ಸೃಷ್ಟಿಸಿವೆ. ಇನ್ನೂ ಈ ಭಾಗದಲ್ಲಿ ಗಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರಿಗೆ ಮುಂಜಾಗ್ರತಾ ಕ್ರಮವಾಗಿ ಆಳ ಸಮುದ್ರಕ್ಕೆ ಇಳಿದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+