Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಕೆಲವೆಡೆ ಮಾತ್ರ ಮಳೆಯೇ ಇಲ್ಲದೇ, ಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗೆಯೇ ಇಂದು (ಜೂನ್ 30) ಇನ್ನೂ ಕೆಲವೇ ಗಂಟೆಗಳಲ್ಲಿ ರಾಜ್ಯದ ಹಲವು ಭಾಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆತೇ ಇನ್ನೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಹಲವು ಅನಾಹುತಗಳನ್ನು ಸೃಷ್ಟಿಸಿದ್ದಾನೆ.

ಈಗಾಗಲೇ ಕರಾವಳಿ ಭಾಗದಲ್ಲಿ ಸುನಾಮಿಯಂತಹ ಮಳೆಯಾಗುತ್ತಿದ್ದು, ಹಲವು ಅನಾಹುತಗಳೇ ಸಂಭವಿಸಿವೆ. ಹಾಗೆಯೇ ಇಂದು (ಜೂನ್ 30) ಕೆಲವೇ ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದ್ದು, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬಾಗಲಕೋಟೆ, ಧಾರವಾಡ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಇನ್ನುಳಿದಂತೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಮೊದಲಿನ ರೀತಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಮತ್ತೊಂದೆಡೆ ನೋಡುವುದಾದರೆ, ಈಗಾಗಲೇ ಮುಂಗಾರು ಅಬ್ಬರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ಉಕ್ಕಿ ಹರಿಯುತ್ತಿದ್ದರೆ, ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ರಾಜ್ಯಕ್ಕೆ ಜೂನ್ 1ರಿಂದಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ. ಇದೀಗ ಹಲವು ಜಿಲ್ಲೆಗಳಲ್ಲಿ ಮಾತ್ರ ಮುಂಗಾರು ಚುರುಕು ಪಡೆದಿದ್ದು, ಅಬ್ಬರದ ಮಳೆಯಾಗುತ್ತಿದೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದೆ. ಅದರಲ್ಲೂ ಕರಾವವಳಿ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಮೀನುಗಾರರಿಗೆ ಸಮುದ್ರದ ಆಳಕ್ಕೆ ಇಳಿಯದಂತೆಯೂ ಈಗಾಗಲೇ ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ರವಾನಿಸಿದೆ.












Click it and Unblock the Notifications