Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ರಣಭೀಕರ ಮಳೆ
Karnataka Rains: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪರಿಣಾಮ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಳ ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳಿಲಿದೆ ಎಂದು ಇಲ್ಲಿ ತಿಳಿಯಿರಿ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಇನ್ನೂ ಕೆಲವು ಜಿಲ್ಲಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಭಾಗದಲ್ಲಂತೂ ಭಾರೀ ಮಳೆಯಿಂದ ಪ್ರವಾಹದ ಭೀತಿ ನಿರ್ಮಾಣವಾಗಿದ್ದು, ಇದೀಗ ಈ ಭಾಗದಲ್ಲು ಸ್ವಲ್ಪ ಮಟ್ಟಿಗೆ ಮಳೆ ತಗ್ಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಧಾರವಾಡ, ಚಾಮರಾಜನಗರ, ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ.
ಇನ್ನು ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಅಬ್ಬರದ ಮಳೆ ಮುಂದುವರೆಯಲಿದ್ದು, ಇಲ್ಲಿ ಗಾಳಿ ವೇಗವು ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಲೋ ಮೀಟರ್‌ವರೆಗೂ ಬೀಸುವ ಸಾಧ್ಯತೆಯುದ್ದು, ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈಗಾಗಲೇ ಭಾರೀ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಜಿಲ್ಲೆಗಳ ಹಲವೆಡೆ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ಈ ಪೈಕಿ ಬೆಳಗಾವಿ ಜಿಲ್ಲೆ ಜನರು ಮಳೆ ಒಂದು ವಾರವಾದರೂ ನಿಲ್ಲಲಿ ಎಂದು ದೇವರ ಮೊರೆಹೋದ ಘಟನೆಗಳು ನಡೆದಿದ್ದವು. ಒಟ್ಟಿನಲ್ಲಿ ಕಳೆದ ವರ್ಷದ ಬರವನ್ನು ಈ ಬಾರಿ ಸುರಿದ ಮುಂಗಾರು ಮಳೆ ನೀಗಿಸಿದೆ ಎಂದರೆ ತಪ್ಪಾಗಲಾರದು.












Click it and Unblock the Notifications