ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Cyclone Fengal: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದಲ್ಲೂ ಹಲವೆಡೆ ಮಳೆ ಮುಂದುವರೆದಿದೆ. ಇನ್ನು ಬಂಗಾಲಕೊಲ್ಲಿಯಲ್ಲಿನ ಫೆಂಗಲ್ ಚಂಡಮಾರುತದ ಪರಿಣಾಮ ಮುಂದಿನ 48 ಗಂಟೆಗಳಲ್ಲಿ ಹಲವು ಜಿಲ್ಲೆಗಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿಯಲ್ಲಿ ಇಂದು (ಡಿಸೆಂಬರ್ 1) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣ ಆಗಿದ್ದು, ಮಧ್ಯಾಹ್ನದ ವೇಳೆಗೆ ನಗರದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಇನ್ನು ರಾತ್ರಿ ವೇಳೆಗೆ ಮತ್ತಷ್ಟು ಚುರಯಕು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ಹಿನ್ನೆಲೆ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ರಾಜಧಾನಿ ಸೇರಿದಂತೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೀ ಭಾರೀ ಮಳೆ ಮುಂದುವರೆದಿದೆ. ಅಲ್ಲದೆ ಇನ್ನು ಮುಂದಿನ ಕೆಲವು ದಿನಗಳ ಕಾಲ ಭಾಗದಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲಿ ಮುಂದಿನ 48 ಗಂಟೆಗಳಲ್ಲಿ 35 ರಿಂದ 85 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ನಾಳೆ (ಡಿಸೆಂಬರ್ 02) ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Cyclone Fengal effect on Karnataka in the next 48 hours #KarnatakaRains #BengaluruRains
— Karnataka Weather (@Bnglrweatherman) December 1, 2024
• Chamarajanagara - Mysuru - Kodagu - Dakshina Kannada districts to remain the hotspots for heavy rains
• Bengaluru - Kolar - Chikkaballapura - Tumakuru - Ramanagara - Mandya - Hassan -… pic.twitter.com/YMrgwu0Fp6
ಭಾರೀ ಮಳೆ ಮುನ್ಸೂಚನೆ?: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಈ ಭಾಗದಲ್ಲಿ ಡಿಸೆಂಬರ್ 2 & 3ರಂದು ಚದುರಿದಂತೆ ವ್ಯಾಪಕವಾಗಿ ಅತಿಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ 3ರವರೆಗೆ ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ ಒತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂವಚನೆ ನೀಡಿದೆ.
ಉತ್ತರ ಒಳನಾಡಿದ ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆಗೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.












Click it and Unblock the Notifications