Karnataka Rains: ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಿಗೆ ಬಿರುಗಾಳಿ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದು ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಇಂದು (ಜುಲೈ 14) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಕರಾವಳಿ ಭಾಗದಲ್ಲಿ ಬಿರುಗಾಳಿ ಮಳೆ ಮುಂದುವರೆದು ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದು, ಇದರಿಂದ ಇಲ್ಲಿನ ಜನಜೀವನ ಅಸ್ತವಾಗಿದೆ. ಹಾಗೆಯೇ ಇನ್ನೂ ಕೆಲವೇ ಗಂಟೆಗಳಲ್ಲಿ ಭಾಗದಲ್ಲಿ ಮಳೆರಾಯನ ಆರ್ಭಟ ಮತ್ತಷ್ಟು ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy rainfall forecast in these districts in next three hours on july 14th

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟಕ್ಕೆ ಜನರು ನಲುಗಿನ ಹೋಗಿದ್ದಾರೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಮತ್ತೊಂದೆಡೆ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಮುಂದುವರೆದು, ಸಂಜೆ ವೇಳೆಗೆ ಮೋಡ ಕವಿದ ವಾತಾರವಣ ನಿರ್ಮಾಣವಾಗಿ, ಆಗಾಗ ಜಿನುಗು ಮಳೆಯಾಗುತ್ತಿದೆ.

ಎಲ್ಲೆಲ್ಲಿ ಮಳೆ?: ಇನ್ನು ಇಂದು (ಜುಲೈ 14) ಇನ್ನೂ ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಬೀದರ್‌, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ತುಂಬಿ ಹರಿಯುತ್ತಿರುವ ಕೆರೆ-ಕಟ್ಟೆಗಳು: ಈಗಾಗಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಅಲ್ಲದೆ ಮತ್ತೊಂದೆಡೆ, ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗುತ್ತಲಿದೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸವೂ ಹೆಚ್ಚಾಗುತ್ತಲಿದೆ.

ರೈತರ ಮುಖದಲ್ಲಿ ಮಂದಹಾಸ: ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರೈತರು ಬೆಳೆದ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದು, ಇದರಿಂದ ಬೆಳೆಗಾರರು ಕಂಗಾಲಾಗಿದ್ದರು. ಇನ್ನು ಈ ಬಾರಿ ಅಂದರೆ, 2024ರ ಜೂನ್‌ ಆರಂಭದಿಂದಲೇ ಮುಂಗಾರು ಚುರುಕು ಪಡೆದಿರುವ ಹಿನ್ನೆಲೆ ಜಲ ಮೂಲಗಳಿಗೆ ಜೀವಕಳೆ ಬಂದಂತಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+