Karnataka Rains: ಮೂರು ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟದಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಜುಲೈ 21) ಇನ್ನೂ ಕೆಲವೇ ಗಂಟೆಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆದಿದೆ. ಹಾಗೆಯೇ ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದ್ದು, ಈ ಹಿನ್ನೆಲೆ ಈ ಭಾಗದ ಜನರು ಪ್ರವಾಹದ ಭೀತಿಯಲ್ಲಿದ್ದಾರೆ. ಮತ್ತೊಂದೆಡೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಕಲಬುರಗಿ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Rains Heavy rainfall forecast in these districts in three hours on july 21

ಈಗಾಗಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಹಾಗೆಯೇ ರಾಜ್ಯದ ಹಲವು ಪ್ರಮುಖ ಜಲಾಶಯಗಳು ತುಂಬುವ ಹಂತವನ್ನು ತಲುಪಿದ್ದು, ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಮತ್ತೊಂದೆಡೆ ಜಲಶಾಯಗಳ ನೀರಿನ ಮಟ್ಟ ಹೆಚ್ಚಿದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಹೆಚ್ಚಾದಂತಾಗಿದೆ.

ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರೈತರು ಬೆಳೆದ ಬೆಳೆಗಳು ನೆಲಕಚ್ಚಿದ್ದವು. ಇನ್ನೂ ಈ ಬಾರೀ ಅಂದರೆ 2024ರ ಜೂನ್‌ ಆರಂಭದಿಂದಲೇ ಮುಂಗಾರು ಆರಂಭವಾಗಿದ್ದು, ಇದುವರೆಗೂ ಕೂಡ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಕೆಲವೆಡೆ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿದ್ದು, ಇನ್ನೂ ಕೆಲವು ಜಿಲ್ಲಗಳಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಹಾಗೆಯೇ ಇನ್ನೂ ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+