Karnataka Rains: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಸುನಾಮಿ ಮಳೆ ಮುನ್ಸೂಚನೆ

Karnataka Rain: ಈಗಾಗಲೇ ರಾಜ್ಯಾಂದ್ಯಂತ ಮುಂಗಾರು ಚುರುಕು ಪಡೆದಿದೆ. ಇನ್ನು ನಿನ್ನೆ (ಜೂನ್‌ 06 ರಣಭೀಕರ ಮಳೆ ಸುರಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ಹೊಡೆಯುವುದಲ್ಲದೆ, ದೊಡ್ಡ ದೊಡ್ಡ ಅನಾಹುತಗಳೇ ಸೃಷ್ಟಿಯಾಗಿವೆ. ಹಾಗೆಯೇ ಈ ಜಿಲ್ಲೆಗಳಲ್ಲಿ ಇಂದು (ಜೂನ್‌ 07) ಇನ್ನೂ ಕೆಲವೇ ಗಂಟೆಗಳಲ್ಲಿ ಗುಡುಗು ಸಹಿತ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಭಾರೀ ಮಳೆ ಬೀಳಲಿದೆ ಎಂದು ಇಲ್ಲಿ ತಿಳಿಯಿರಿ.

ಬೆಂಗಳೂರಿನಲ್ಲಿ ನಿನ್ನೆ (ಜೂನ್‌ 06) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸುಮಾರು ರಾತ್ರಿ 7 ಗಂಟೆ ವೇಳೆಗೆ ಮಳೆರಾಯನ ಆರ್ಭಟ ಮುಂದುವರೆದಿತ್ತು. ಇನ್ನು ಇಂದು (ಜೂನ್‌ 07) ಬೆಳಗ್ಗೆಯೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಅಬ್ಬರದ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Rain Heavy rainfall forecast in these districts of state for next 24 hours from june 07

ಇಂದು (ಜೂನ್‌ 07) ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಚಿತ್ರದುರ್ಗ, ಹಾವೇರಿ, ಗದಗ, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು ಉಡುಪಿ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಈಗಾಗಲೇ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ಇದರಿಂದ ಅನ್ನದಾತರ ಮುಖದಾಲ್ಲಿ ಮಂದಹಾಸ ಮೂಡಿದಂತಾಗಿದೆ.

ಮತ್ತೊಂದೆಡೆ ರಾಜ್ಯದ ಪ್ರಮುಖ ಜಲಾಶಯಗಳಲ್ಲೂ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಇನ್ನು ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮಳೆ ಹೀಗೆ ಮುಂದುವರೆದರೆ ಇನ್ನು ಕೆಲವೇ ದಿನಗಳಲ್ಲಿ ಜಲಾಶಯಗಳು ತುಂಬಿದರೂ ತುಂಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+