Karnataka Rains: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದೆ. ಆದರೆ ಇನ್ನು ಕೆಲವು ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದು (ಅಕ್ಟೋಬರ್ 12) ಇನ್ನೂ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಮುಂಗಾರು ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ನೋಡುವುದಾದರೆ, ನದಿ, ಕೆರೆ-ಕಟ್ಟೆಗಳು ತುಂಬಿ ಹರಿಸಿದ್ದರೆ, ಬಹುತೇಕ ಪ್ರಮುಖ ಜಲಾಶುಗಳು ಭರ್ತಿಯಾಗಿವೆ. ಇನ್ನು ಕೆಲವು ತುಂಬುವ ಹಂತದಲ್ಲಿವೆ. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

Karnataka Rains Heavy Rainfall Forecast in These Districts of State for Next 3 Hours on october 12

ಮತ್ತೆ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಇನ್ನು ಇಂದು (ಅಕ್ಟೋಬರ್‌ 12) ರಾಜ್ಯಾದ್ಯಂತ ಮಳೆ ಆಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಚುರುಕು ಪಡೆಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಂದಲೂ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದ ವೇಳೆಗೆ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಎರಡ್ಮೂರು ದಿನಗಳಿಂದ ನಗರದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ.

ಇನ್ನು ಇಂದು ವಿಯದಶಮಿಯಂದೇ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾವೇರಿ, ದಾವಣಗೆರೆ, ಚಿತ್ರದುರ್ಗ ಬಳ್ಳಾರಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಉಳಿದಿರುವ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಭಾರೀ ಮಳೆ?: ಬೆಂಗಳೂರಿನ ಹಲವೆಡೆ ಇಂದು ಮಟ ಮಟ ಮಧ್ಯಾಹ್ನವೇ ಮಳೆರಾಯ ಆರ್ಭಟಿಸಿದ್ದಾನೆ. ಅಲ್ಲದೆ, ಹಾವೇರಿ, ಧಾರವಾಡ, ಶಿವಮೊಗ್ಗ, ಮೈಸೂರು ಸೇರಿದಂಯೆ ಹಲವೆಡೆ ಹೆಚ್ಚು ಮಳೆಯಾಗಿದೆ. ಇನ್ನು ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತದ ಹಿನ್ನಲೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ ಹಲವೆಡೆ ಮಳೆಯಾವು ಸಾಧ್ಯತೆಯಿದೆ.

ಅಕ್ಟೋಬರ್ 16ರಿಂದ 18ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆ ಸುರಿಯುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಯೆಲ್ಲೋ ಅಲರ್ಟ್‌ ಘೋಷಣೆ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಗಳಿಹೆ ಅಕ್ಟೋಬರ್ 16, 17ರಂದು ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+