Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಸುರಿಯಲಿದೆ ರಣಭೀಕರ ಮಳೆ

Karnataka Rains: ರಾಜ್ಯದಲ್ಲಿ ಇದೀಗ ಮಳೆರಾಯನ ಆರ್ಭಟ ಮತ್ತೆ ಮುಂದುವರೆದಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ 3 ಗಟೆಗಳಲ್ಲಿ ಈ ಭಾಗಗಳಲ್ಲಿ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್‌ 16) ಬೆಳಗ್ಗೆಯಿಂದಲೂ ಮೋಡ ಮುಚ್ಚಿದ ವಾತಾವರಣ ನಿರ್ಮಾಣವಾಗಿದ್ದು, ಜಿನುಗು ಮಳೆ ಮುಂದುವರೆದಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕಳೆದ ಒಂದು ವಾರದಿಂದ ನಗರದಲ್ಲಿ ಬಿಡುವಿಲ್ಲದೆ, ಮಳೆತಾಗುತ್ತಿದೆ.

Karnataka Rains Heavy Rainfall Forecast in These Districts of State for Next 3 Hours on october 16

ಇನ್ನು ಭಾರೀ ಮಳೆ ಮುಂದುವರೆದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನಾಹುತಗಳಾದಂತೆ ಬೆಂಗಳೂರಿನ ಹಲವು ಐಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್‌ ಪ್ರಮ್‌ ಹೋಮ್‌ ನೀಡಲಾಗಿದೆ. ಹಾಗೆಯೇ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆವರಿಸಿಬಿಟ್ಟಿದೆ.

ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ: ಹಾಗೆಯೇ ಮುಂದಿ ಮುಂದಿನ 3 ಗಂಟೆಗಳಲ್ಲಿ ಬೀದರ್, ಬಿಜಾಪುರ, ಗುಲ್ಬರ್ಗದ ಪ್ರತ್ಯೇಕ ಸ್ಥಳಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಕೊಪ್ಪಳ ಮತ್ತು ತುಮಕೂರು ಭಾಗಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮಲೆನಾಡು ಮತ್ತು ಕರಾವಳಿ ಕರ್ನಾಟಕ ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದಂಯೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆರೆಂಜ್‌, ಯೆಲ್ಲೋ ಅಲರ್ಟ್‌: ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮೈಸೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+