Karnataka Rains: ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಮುನ್ಸೂಚನೆ
Karnataka Rains: ಇದೀಗ ರಾಜ್ಯದ ಬಹುತೇಕ ಭಾಗಗಲಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಕೆಲವು ಕೆಲವಡೆ ಮಾತ್ರ ಆರ್ಭಟಿಸುತ್ತಿದ್ದಾನೆ. ಇನ್ನು ಮುಂದಿನ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮುಂದಿನ ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡತೆ ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈಗಾಗಲೇ ರಾಜ್ಯದ ಹಲವೆಡೆ ಮುಂಗಾರು ಮಳೆ ಆರ್ಭಟದಿಂದ ಅವಾಂತರಗಳೇ ಸೃಷ್ಟಿಯಾಗಿವೆ.
ಮತ್ತೊಂದೆಡೆ ನೋಡುವುದಾದರೆ, ಬತ್ತಿ ಹೋಗುವ ಹಂ ತಲುಪಿದ್ದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಒಡಿಶಾದಲ್ಲಿ ಭಾರೀ ಮಳೆ: ಪಶ್ಚಿಮ ಬಂಗಾಳಕ್ಕೆ ಹೊಂದಿಕೊಂಡಿರುವ ಉತ್ತರ ಒಡಿಶಾ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ಮುಂದಿನ ಒಂದೆರಡು ದಿನಗಳ ಕಾಲವೂ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 15 & 16ರಂದು ಒಡಿಶಾದದಲ್ಲಿ ಭಾರೀ ಮಳೆಯಾಗುವ ಸಾಧ್ನಿಯತೆಯಿದೆ ಎಂದು ತಿಳಿಸಿದೆ. ಭದ್ರಕ್, ಜಾಜ್‌ಪುರ್, ಕೇಂದ್ರಪಾರಾ, ಅಂಗುಲ್ ಮತ್ತು ಧೆಂಕನಲ್ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 7-20 ಸೆಂಟಿ ಮೀಟರ್‌ಗಳಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಮುಖ್ಯ ಗುಮ್ಮಟ ಸೋರಿಕೆ: ಆಗ್ರಾದಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಸುರಿದ ಪರಿಣಾಮ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್‌ಮಹಲ್‌ನ ಮುಖ್ಯ ಗುಮ್ಮಟ ಸೂರುತ್ತಿದ್ದು, ಆವರಣದಲ್ಲಿರುವ ಉದ್ಯಾನಕ್ಕೂ ನೀರು ನುಗ್ಗಿದೆ.
ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆ ಅಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಹಿರಿಯ ಅಧಿಕಾರಿಯೊಬ್ಬರು, ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿ ಆಗಿಲ್ಲ ಎಂದು ತಿಳಿಸಿದ್ದಾರೆ.
ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ರಾಜ್‌ಕುಮಾರ್ ಪಟೇಲ್ ಅವರು, "ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆ ಆಗಿರುವುದನ್ನು ನಾವು ನೋಡಿದ್ದೇವೆ. ಪರಿಶೀಲನೆ ಮಾಡಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿ ಆಗಿಲ್ಲ. ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ," ಎಂದು ತಿಳಿಸಿದರು.












Click it and Unblock the Notifications