Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಮುನ್ಸೂಚನೆ

Karnataka Rains: ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಬಹುತೇಕ ಭಾಗಗಳಲ್ಲಿ ಕೆರೆ, ಕಟ್ಟೆಗಳು ಜೊತೆಗೆ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿವೆ. ಇನ್ನು ಕೆಲವು ಡ್ಯಾಂಗಳು ತುಂಬುವ ಹಂತವನ್ನು ತಲುಪಿವೆ. ಇದೀಗ ಮತ್ತೆ ಮಳೆರಾಯ ಚುರುಕು ಪಡೆದಿದ್ದು, ಮುಂದಿನ ಒಂದು ವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹಾವಮಾನ ಇಲಾಖೆ ಮುನ್ಸೂಚನೆ ನೀಡಿದೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ, ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹಾಗೆಯೇ ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

Karnataka Rains Heavy Rainfall Forecast in These Districts of State for Next one Week

ಇನ್ನು ಇಂದು (ಅಕ್ಟೋಬರ್ 5) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಎರಡು ದಿನಗಳಿಂದ ನಗರದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗರಯೇ ಮುಂದಿನ ಕೆಲವು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

ಮುಂದಿನ ಒಂದು ವಾರ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಗೆಯೇ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಾವಣಗೆರೆ, ಬಳ್ಳಾರಿ, ಕಲಬುರಗಿ, ಮೈಸೂರು ಸೇರಿದಂತೆ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಮಾಯವಾಗಿದ್ದ ಮುಂಗಾರು ಮಳೆ ಮತ್ತೆ ರಾಜ್ಯದ ಹಲವು ಜಿಲ್ಲೆಗಳನ್ನು ಆವರಿಸಿಬಿಟ್ಟಿದೆ.

ಈಗಾಗಲೇ ನಿನ್ನೆ (ಅಕ್ಟೋಬರ್‌ 06) ಸುರಿದ ಭಾರೀ ಮಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಮೊದಲು ಮುಂಗಾರು ಕೇರಳಕ್ಕೆ ಎಂಟ್ರಿ ಕೊಟ್ಟಿದ್ದು, ಬಳಿಕ ಜೂನ್‌ ಆರಂಭ ಆಗುತ್ತಿದ್ದಂತೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿತ್ತು. ಇದರಿಂದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಾರವಾರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು ಚಾಮರಾಜನಗರ, ದಾವಣಗೆರೆ, ಬೆಳಗಾವಿ, ಬೀದರ್‌, ಧಾರವಾಡ, ಹುಬ್ಬಳ್ಳಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಚಿತ್ರದುರ್ಗ, ಕಲಬುರಗಿ, ಗುಲ್ಬರ್ಗ, ವಿಜಯಪುರ ಸೇರಿದಂತೆ ಹಲವೆಡೆಯೂ ಭಾರೀ ಮಳೆ ಸುರಿದಿತ್ತು.

ಮತ್ತೊಂದೆಡೆ ನೋಡುವುದಾದರೆ, ಕಳೆದ ಬಾರಿ ಮುಂಗಾರು ಮಳೆ ಕೈಕೊಟ್ಟು ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ನೆಲಕಚ್ಚಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದರು. ಆದರೆ ಈ ಭಾರೀ ಸುರಿದ ಮುಂಗಾರು ಮಳೆಯಿಂದ ಕೆರೆ, ಕಟ್ಟೆಗಳು, ಪ್ರಮುಖ ಜಲಾಶಯಗಳು ತುಂಬಿದ್ದವು. ಕೆಲವು ಜಲಾಶಯಗಳು ಮಾತ್ರ ಭರ್ತಿಯಾಗುವ ಹಂತದಲ್ಲಿವೆ.

ಆಗಷ್ಟ್‌ವರೆಗೂ ಮುಂಗಾರು ಮಳೆ ಅಬ್ಬರಿಸಿ ಮತ್ತೆ ತಗ್ಗಿತ್ತು. ಇದೀಗ ಮತ್ತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಟ್ಟಹಾಸವನ್ನು ಶುರು ಮಾಡಿದ್ದಾನೆ. ಹಾವಾಮಾನ ಇಲಾಖೆ ಮಾಹಿತಿ ಪ್ರಕಾರ, ಮತ್ತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+