Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಜೂನ್‌ 19ರಿಂದ ಮುಂಗಾರು ಆರ್ಭಟ ಹೆಚ್ಚಳದ ಮುನ್ಸೂಚನೆ

Karnataka Rain: ಈಗಾಗಲೇ ರಾಜ್ಯಾದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಅಬ್ಬರ ಮಳೆಯಿಂದ ಅನಾಹುತಗಳೇ ಸೃಷ್ಟಿಯಾದ ಘಟನೆಗಳು ನಡೆದಿವೆ. ಹಾಗೆಯೇ ಜೂನ್‌ 19ರ ಬಳಿಕ ಮಳೆರಾಯನ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗ್ಯಾಪ್‌ ಕೊಟ್ಟು ಮಳೆರಾಯ ಆರ್ಭಟಿಸುತ್ತಲೇ ಇದ್ದು, ಹಲವೆಡೆ ರಸ್ತೆಗಳು ಚರಂಡಿಯಂತೆ ನಿರ್ಮಾಣವಾದ ಘಟನೆಗಳು ನಡೆದಿವೆ. ಇನ್ನು ಇದರಿಂದ ವಾಹನ ಸವಾರರು ಪರದಾಡಿದ ಘಟನೆಗಳು ಸಂಭವಿಸಿವೆ. ಹಾಗೆಯೇ ಇನ್ನು ಮುಂದಿನ ದಿನಗಳಲ್ಲಿ ಮಳೆರಾಯನ ಆರ್ಭಟ ಮತ್ತಷ್ಟು ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಅಂತಿದ್ದಾರೆ ಹವಾಮಾನ ಇಲಾಖೆ ತಜ್ಞರು.

Karnataka Rain Heavy rainfall forecast in these districts of state from June 19

ಈಗಾಗಲೇ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಈಗಾಗಲೇ ಆರ್ಭಟಿಸಿ ಕೆರೆ-ಕಟ್ಟೆಗಳು ತುಂಬಿ ಹರಿದು ಹಲವು ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ, ಮತ್ತೊಂದೆಡೆ ಬತ್ತಿಹೋಗುತ್ತಿದ್ದ ಜಲಾಶಯಗಳಿಗೆ ಭಾರೀ ಮಳೆಯಿಂದ ಜೀವಕಳೆ ಬಂದಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಹವಾಮಾನ ಇಲಾಖೆ ಪ್ರಕಾರ, ಜೂನ್ 19ರ ನಂತರ ಮುಂಗಾರು ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆಯಿದೆ. ಕರ್ನಾಟಕದ ಹಲಚೆಡೆ ಈ ತಿಂಗಳ ಕೊನೆಯ 10 ದಿನಗಳಲ್ಲಿ ಭಾರೀ ಮಳೆಯಾಗಲಿದೆ. ಮತ್ತು ಜುಲೈ ಮೊದಲ ವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಇದೇ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತೀ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+